ಸಾಂದರ್ಭಿಕ ಚಿತ್ರ
ಪೆಶಾವರ: ವಾಯವ್ಯ ಪಾಕಿಸ್ತಾನದಲ್ಲಿ ಧಾರಾಕಾರ ಮಳೆಯಿಂದ ಹಠಾತ್ ಪ್ರವಾಹ ಉಂಟಾಗಿದ್ದು, ಕೆಲವು ಕಡೆ ಮನೆಗಳ ಚಾವಣಿಗಳು ಕುಸಿದಿವೆ. ಕಳೆದ 24 ತಾಸುಗಳಲ್ಲಿ ಮಳೆ ಸಂಬಂಧಿ ಅವಘಡಗಳಿಂದ 11 ಜನರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಫ್ಗಾನಿಸ್ತಾನದ ಗಡಿಯ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಟ್ಯಾಂಕ್ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಮನೆಯ ಚಾವಣಿ ಕುಸಿದು ಏಳು ಜನರು ಮತ್ತು ಕರಕ್ ಜಿಲ್ಲೆಯಲ್ಲಿ ನಾಲ್ವರು ಪ್ರವಾಹದಲ್ಲಿ ಮುಳುಗಿ ಸತ್ತಿದ್ದಾರೆ ಎಂದು ಪ್ರಾಂತೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.
ಮಳೆಯಿಂದ ಹಾನಿಗೀಡಾದ ಪ್ರದೇಶಗಳ ಜನರಿಗೆ ಸಾಧ್ಯವಾದಷ್ಟು ನೆರವು ಮತ್ತು ಪರಿಹಾರ ನೀಡುವಂತೆ ಆಯಾ ಜಿಲ್ಲಾಡಳಿತಗಳಿಗೆ ಖೈಬರ್ ಪಖ್ತುಂಖ್ವಾ ಮುಖ್ಯಮಂತ್ರಿ ಅಲಿ ಅಮೀನ್ ಗಂಡಪುರ್ ಸೂಚಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.