ಸಾಂದರ್ಭಿಕ ಚಿತ್ರ
ಪೇಶಾವರ: ವಾಯವ್ಯ ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಮಂಗಳವಾರ ಧಾರಾಕಾರ ಮಳೆಯಾಗಿದ್ದು, ಹಠಾತ್ ಪ್ರವಾಹ ಉಂಟಾಗಿದೆ. ಪ್ರವಾಹದ ನೀರು ಮನೆಯೊಂದರ ತಳಮಹಡಿಗೆ ನುಗಿದ ಪರಿಣಾಮ 6 ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಕನಿಷ್ಠ 11 ಜನರು ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪೇಶಾವರದಿಂದ ದಕ್ಷಿಣಕ್ಕೆ 35 ಕಿಲೋಮೀಟರ್ ದೂರದಲ್ಲಿರುವ ಕೊಹತ್ ಜಿಲ್ಲೆಯ ದರ್ರಾ ಆದಮ್ ಖೇಲ್ ತೆಹಸಿಲ್‌ನಲ್ಲಿ ಈ ಘಟನೆ ನಡೆದಿದೆ.
ಪ್ರವಾಹದ ಸಂದರ್ಭದಲ್ಲಿ ಕುಟುಂಬವು ತಳಮಹಡಿಯಲ್ಲಿ ಸಿಲುಕಿತ್ತು. ನಂತರ ಹೊರಬರಲು ಸಾಧ್ಯವಾಗದೆ ದುರಂತ ಸಂಭವಿಸಿದೆ. 6 ಮಕ್ಕಳು, ಮೂವರು ಮಹಿಳೆಯರು ಹಾಗೂ ಇಬ್ಬರು ಪುರುಷರು ಮೃತಪಟ್ಟಿದ್ದಾರೆ ಎಂದು ಪ್ರಾಂತೀಯ ವಿಪತ್ತು ನಿರ್ವಹಣಾ ಸಂಸ್ಥೆ ತಿಳಿಸಿದೆ.
ಸ್ಥಳಕ್ಕೆ ಧಾವಿಸಿದ ರಕ್ಷಣಾ ತಂಡಗಳು ಮೃತದೇಹಗಳನ್ನು ಹೊರತೆಗೆದ್ದಿದ್ದು, ಕೊಹತ್‌ನಲ್ಲಿರುವ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ.
ಖೈಬರ್ ಪಖ್ತುಂಖ್ವಾ ಮುಖ್ಯಮಂತ್ರಿ ಅಲಿ ಅಮೀನ್ ಗಂದಪುರ್ ಸಾವಿನ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.