ಕಠ್ಮಂಡು: ಭಾರಿಮಳೆಯಿಂದಾಗಿಪಶ್ಚಿಮ ನೇಪಾಳದ ಅಚಾಮ್ ಜಿಲ್ಲೆಯ ಹಲವುಭಾಗಗಳಲ್ಲಿಶನಿವಾರ ಮುಂಜಾನೆ ಭೂಕುಸಿತಸಂಭವಿಸಿದ್ದು, 13 ಮಂದಿ ಮೃತಪಟ್ಟಿದ್ದಾರೆ.
ಅವಶೇಷಗಳಡಿಯಲ್ಲಿ ಸಿಲುಕಿದ್ದ 10 ಮಂದಿಯನ್ನು ರಕ್ಷಿಸಲಾಗಿದೆ.10 ಮಂದಿನಾಪತ್ತೆಯಾಗಿದ್ದು, ಅವರಿಗಾಗಿಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆಎಂದು ಉಪ ಮುಖ್ಯ ಜಿಲ್ಲಾ ಅಧಿಕಾರಿ ದೀಪೇಶ್ ರಿಜಾಲ್ ತಿಳಿಸಿದ್ದಾರೆ.
ಭೂಕುಸಿತ ಸಂಭವಿಸಿರುವ ಪ್ರದೇಶದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲು ಹೆಲಿಕಾಪ್ಟರ್‌ಗಳನ್ನು ನಿಯೋಜಿಸುವಂತೆ ನೇಪಾಳದ ಗೃಹ ಸಚಿವರು ಆದೇಶಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.