ADVERTISEMENT

ಪಾಕಿಸ್ತಾನದ ಪಂಜಾಬ್‌ ಪ್ರಾಂತ್ಯದಲ್ಲಿ ಬಸ್‌ – ಟ್ರಕ್‌ ಡಿಕ್ಕಿ, 13 ಮಂದಿ ಸಾವು

ಪಿಟಿಐ
Published 14 ಆಗಸ್ಟ್ 2022, 11:35 IST
Last Updated 14 ಆಗಸ್ಟ್ 2022, 11:35 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಲಾಹೋರ್ (ಪಿಟಿಐ): ‘ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದರಹೀಮ್ ಯಾರ್ ಖಾನ್ ಜಿಲ್ಲೆಯಲ್ಲಿ ಶನಿವಾರ ಸಂಜೆ ಕಬ್ಬು ತುಂಬಿದ ಟ್ರಕ್‌ಗೆ ಮತ್ತು ಬಸ್ ಮುಖಾಮುಖಿ ಡಿಕ್ಕಿ ಹೊಡೆದುದರಿಂದ 13 ಜನರು ಮೃತಪಟ್ಟಿದ್ದಾರೆ’ ಎಂದು ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ.

‘ಬಸ್ಸಿನಲ್ಲಿ 18 ಮಂದಿ ಪ್ರಯಾಣಿಕರಿದ್ದರು. ಗಾಯಗೊಂಡ ಐದು ಮಂದಿಯ ಸ್ಥಿತಿ ಗಂಭೀರವಾಗಿದೆ. ಟ್ರಕ್ ಚಾಲಕ ಪರಾರಿಯಾಗಿದ್ಧಾನೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಅಪಘಾತ ಸಂಭವಿಸಿದ ರಸ್ತೆಯಲ್ಲಿ ಮಳೆ ನೀರು ಸಂಗ್ರಹವಾಗಿತ್ತು.ಅಪಘಾತದ ನಂತರ ಬಸ್ ಕಬ್ಬಿನ ಮೂಟೆಗಳ ಅಡಿಯಲ್ಲಿ ಹೂತುಹೋಗಿತ್ತು. ಆದ್ದರಿಂದ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಸಾಕಷ್ಟು ಸಮಯ ಬೇಕಾಯಿತು’ ಎಂದರು.

ADVERTISEMENT

ಕಳಪೆ ಮೂಲಸೌಕರ್ಯ, ಶಿಥಿಲಗೊಂಡ ವಾಹನಗಳು ಮತ್ತು ಸಂಚಾರ ನಿಯಮಗಳ ಪಾಲನೆಯ ಕೊರತೆಯಿಂದ ಪಾಕಿಸ್ತಾನದಲ್ಲಿ ರಸ್ತೆ ಅಪಘಾತಗಳು ಆಗಾಗ್ಗೆ ಸಂಭವಿಸುತ್ತಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.