ADVERTISEMENT

ನೇಪಾಳ: ಬಸ್‌ ಅಪಘಾತ 14 ಸಾವು

ಪಿಟಿಐ
Published 10 ಮಾರ್ಚ್ 2022, 11:13 IST
Last Updated 10 ಮಾರ್ಚ್ 2022, 11:13 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಕಠ್ಮಂಡು(ಪಿಟಿಐ): ಪೂರ್ವ ನೇಪಾಳದ ಬೆಟ್ಟದ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬಸ್‌ಯೊಂದು ಚಾಲಕನ ನಿಯಂತ್ರಣ ತಪ್ಪಿ 300 ಮೀಟರ್‌ ಆಳಕ್ಕೆ ಬಿದ್ದು 14 ಮಂದಿ ಮೃತಪಟ್ಟಿದ್ದು, ಗಾಯಗೊಂಡ ಐವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈದುರ್ಘಟನೆ ಗುರುವಾರಮುಂಜಾನೆ ದಮಕ್‌ ಮತ್ತು ಮೆಡಿ ಮಾರ್ಗದಲ್ಲಿ ಸಂಭವಿಸಿದ್ದು, ಬಸ್‌ನಲ್ಲಿ 20 ಮಂದಿ ಪ್ರಯಾಣಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದ ತಿಂಗಳು ವಧು–ವರ ಮತ್ತು ಅವರ ಕುಟುಂಬಸ್ಥರು ಪ್ರಯಾಣಿಸುತ್ತಿದ್ದ ವಾಹನವು ಅಪ‍ಘಾತಕ್ಕೀಡಾಗಿತ್ತು. ಅದರಲ್ಲಿ ಎಂಟು ಮಂದಿ ಮೃತಪಟ್ಟು, ಐದು ಮಂದಿ ಗಾಯಗೊಂಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.