ADVERTISEMENT

ಶ್ರೀಲಂಕಾ ಜಲಗಡಿಯಲ್ಲಿ ಮೀನುಗಾರಿಕೆ ನಡೆಸಿದ ಆರೋಪ: 15 ಭಾರತೀಯರು ವಶಕ್ಕೆ

ಪಿಟಿಐ
Published 15 ಮಾರ್ಚ್ 2024, 9:47 IST
Last Updated 15 ಮಾರ್ಚ್ 2024, 9:47 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಕೊಲಂಬೊ: ಶ್ರೀಲಂಕಾ ಜಲ ಗಡಿಯಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ 15 ಮಂದಿ ಭಾರತೀಯ ಮೀನುಗಾರರನ್ನು ಅಲ್ಲಿನ ನೌಕಾಪಡೆ ವಶಕ್ಕೆ ಪಡೆದಿದೆ ಎಂದು ಶುಕ್ರವಾರ ಅಧಿಕೃತ ಹೇಳಿಕೆ ತಿಳಿಸಿದೆ.

ಉತ್ತರ ಜಾಫ್ನಾ ಪರ್ಯಾಯ ದ್ವೀಪದ ಕರೈನಗರದ ಕರಾವಳಿಯಲ್ಲಿ ಮೀನುಗಾರರನ್ನು ವಶಕ್ಕೆ ಪಡೆಯಲಾಗಿದ್ದು, ಅವರನ್ನು ಕಂಕಸಂತುರೈ ಬಂದರಿಗೆ ಕರೆದೊಯ್ಯಲಾಗಿದೆ. ಅಲ್ಲದೇ ಮುಂದಿನ ಕ್ರಮಕ್ಕಾಗಿ ಮೀನುಗಾರಿಕೆ ನಿರ್ದೇಶನಾಲಯಕ್ಕೆ ಹಸ್ತಾಂತರಿಸಲಾಗಿದೆ ಎಂದು ನೌಕಾಪಡೆ ಪ್ರಕಟಣೆಯಲ್ಲಿ ತಿಳಿಸಿದೆ.

ADVERTISEMENT

ಇಂದು ವಶಕ್ಕೆ ಪಡೆದ 15 ಮಂದಿ ಸೇರಿ 2024ರಲ್ಲಿ ಶ್ರೀಲಂಕಾ ನೌಕಾಪಡೆ ವಶಕ್ಕೆ ಪಡೆದ ಒಟ್ಟು ಮೀನುಗಾರರರ ಸಂಖ್ಯೆ 225ಕ್ಕೆ ಏರಿಕೆಯಾಗಿದೆ. ಜತೆಗೆ 16 ದೋಣಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಶ್ರೀಲಂಕಾ ನೌಕಾಪಡೆ ತಿಳಿಸಿದೆ.

ಪಾಕ್ ಜಲಸಂಧಿಯು ತಮಿಳುನಾಡನ್ನು ಶ್ರೀಲಂಕಾದಿಂದ ಬೇರ್ಪಡಿಸುತ್ತದೆ. ಈ ಪ್ರದೇಶ ಎರಡೂ ದೇಶಗಳ ಮೀನುಗಾರರಿಗೆ ಹೇರಳವಾಗಿ ಮೀನು ಸಿಗುವ ಪ್ರದೇಶವಾಗಿದೆ. ಮೀನುಗಾರರ ಸಮಸ್ಯೆ ಭಾರತ ಮತ್ತು ಶ್ರೀಲಂಕಾ ನಡುವಿನ ಬಾಂಧವ್ಯಕ್ಕೆ ಧಕ್ಕೆ ಉಂಟುಮಾಡುತ್ತಿದೆ. ಅಂತರರಾಷ್ಟ್ರೀಯ ಸಮುದ್ರ ಗಡಿ ರೇಖೆಯನ್ನು ದಾಟಿ ಶ್ರೀಲಂಕಾದ ಜಲ ಪ್ರದೇಶದಲ್ಲಿ ಮೀನುಗಾರಿಕೆ ನಡೆಸಿದ ಆರೋಪದ ಮೇಲೆ ಶ್ರೀಲಂಕಾ ಅಧಿಕಾರಿಗಳು ಭಾರತೀಯ ಮೀನುಗಾರರನ್ನು ಬಂಧಿಸಿದ ಹಲವು ನಿದರ್ಶನಗಳಿವೆ.

2023ರಲ್ಲಿ ಶ್ರೀಲಂಕಾ ನೌಕಾಪಡೆ, 240 ಭಾರತೀಯ ಮೀನುಗಾರರನ್ನು ಬಂಧಿಸಿದ್ದು, ಅವರಿಂದ ಸುಮಾರು 35 ದೋಣಿಗಳನ್ನು ವಶಪಡಿಸಿಕೊಂಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.