ADVERTISEMENT

ಹಾಂಗ್‌ಕಾಂಗ್‌ | ಬಹುಮಹಡಿಯಲ್ಲಿ ಅಗ್ನಿ ದುರಂತ: ಮೃತರ ಸಂಖ್ಯೆ 159ಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2025, 14:13 IST
Last Updated 3 ಡಿಸೆಂಬರ್ 2025, 14:13 IST
..
..   

ಹಾಂಗ್‌ಕಾಂಗ್‌: ಹಾಂಗ್‌ಕಾಂಗ್‌ನ ಬಹುಮಹಡಿ ಕಟ್ಟಡದಲ್ಲಿ ಸಂಭವಿಸಿದ ಭೀಕರ ಬೆಂಕಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 159ಕ್ಕೆ ಏರಿಕೆಯಾಗಿದೆ. 

ಬಹುಮಹಡಿ ಕಟ್ಟಡದ ನಿರ್ವಹಣಾ ಕಾರ್ಯದಲ್ಲಿ ತೊಡಗಿದ್ದ ವೇಳೆ ಅಗ್ನಿ ಸುರಕ್ಷತಾ ಎಚ್ಚರಿಕೆ ಗಂಟೆಯನ್ನು ನಿಷ್ಕ್ರಿಯಗೊಳಿಸಿದ ಶಂಕೆ ಮೇಲೆ ಆರು ಜನರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಮೃತರಲ್ಲಿ ಒಂದು ವರ್ಷದ ಮಗು ಹಾಗೂ 97 ವರ್ಷದ ವೃದ್ಧರೊಬ್ಬರು ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಎಂಟು ಅಂತಸ್ತಿನ ಕಟ್ಟಡದಲ್ಲಿ ಈಗಾಗಲೇ ಏಳು ಅಂತಸ್ತುಗಳಲ್ಲಿ ಮೃತದೇಹಗಳಿಗಾಗಿ ಶೋಧ ಕಾರ್ಯ ಪೂರ್ಣಗೊಂಡಿದ್ದು, ಇನ್ನೂ 30 ಜನರು ನಾಪತ್ತೆಯಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.