ADVERTISEMENT

ಇಂಡೊನೇಷ್ಯಾ: ಬಂಡೆಗೆ ಟ್ರಕ್‌ ಡಿಕ್ಕಿ, 17 ಜನರ ಸಾವು

ಏಜೆನ್ಸೀಸ್
Published 13 ಏಪ್ರಿಲ್ 2022, 12:32 IST
Last Updated 13 ಏಪ್ರಿಲ್ 2022, 12:32 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಜಕಾರ್ತ (ಎಪಿ): ಇಂಡೊನೇಷ್ಯಾದ ಪಶ್ಚಿಮ ಪಪುವಾ ಪ್ರಾಂತ್ಯದಲ್ಲಿ ನಡೆಯುತ್ತಿರುವ ಅಕ್ರಮ ಚಿನ್ನದ ಗಣಿಗಾರಿಕೆ ಪ್ರದೇಶದ ಬಳಿ ಬುಧವಾರ 29 ಜನರಿದ್ದ ಟ್ರಕ್‌ ಬಂಡೆಗೆ ಡಿಕ್ಕಿ ಹೊಡೆದು 17 ಜನರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಒಂದು ಮಗು, ಚಾಲಕ ಸೇರಿ 13 ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಗೊಂಡ ಇತರ 16 ಜನರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ. ನಾಲ್ವರು ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT