ADVERTISEMENT

ಪಾಕ್ ಸೈನಿಕರಿಂದ ಬಲೂಚಿಸ್ತಾನದಲ್ಲಿ 17 ಉಗ್ರರ ಹತ್ಯೆ

ಪಿಟಿಐ
Published 27 ಡಿಸೆಂಬರ್ 2025, 16:21 IST
Last Updated 27 ಡಿಸೆಂಬರ್ 2025, 16:21 IST
-----
-----   

ಕರಾಚಿ: ಬಲೂಚಿಸ್ತಾನ ಪ್ರಾಂತ್ಯದಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆಗಳಿಗೆ ಸೇರಿದ ಕನಿಷ್ಠ 17 ಮಂದಿ ಉಗ್ರರನ್ನು ಪಾಕಿಸ್ತಾನ ಭದ್ರತಾ ಪಡೆಗಳು ಹತ್ಯೆ ಮಾಡಿವೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಗುಪ್ತಚರ ಅಧಿಕಾರಿಗಳ ಮಾಹಿತಿ ಮೇರೆಗೆ ಡಿಸೆಂಬರ್‌ 24ರಿಂದ 26ರ ನಡುವೆ ಕೊಹ್ಲಿ, ಕಲಾಟ್ ಮತ್ತು ಪಂಜಗುರ್‌ ಪ್ರದೇಶಗಳಲ್ಲಿ ಕಾರ್ಯಾಚರಣೆ ನಡೆಸಲಾಯಿತು ಎಂದು ಸೇನೆಯ ಮಾಧ್ಯಮ ವಿಭಾಗ ಐಎಸ್‌ಪಿಆರ್ ತಿಳಿಸಿದೆ.

ಕಾರ್ಯಾಚರಣೆ ವೇಳೆ ಶಸ್ತ್ರಾಸ್ತ್ರಗಳು, ಸ್ಫೋಟಕಗಳು ಮತ್ತು ಮದ್ದುಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ. ಹತರಾದವರು ಹಲವು ಉಗ್ರ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಭದ್ರತಾ ಪಡೆಗಳು ಮತ್ತು ಕಾನೂನು ಜಾರಿ ಸಂಸ್ಥೆಗಳು ‘ಆಜಮ್ –ಎ–ಇಸ್ತೆಹ್‌ಕಾಮ್‌’ ಹೆಸರಿನಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.