ADVERTISEMENT

ಅಮೆರಿಕ: ಓಮೈಕ್ರಾನ್‌ ಮೊದಲ ಪ್ರಕರಣ ಪತ್ತೆ

ಏಜೆನ್ಸೀಸ್
Published 2 ಡಿಸೆಂಬರ್ 2021, 11:09 IST
Last Updated 2 ಡಿಸೆಂಬರ್ 2021, 11:09 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ವಾಷಿಂಗ್ಟನ್‌ (ಎಪಿ): ಕ್ಯಾಲಿಫೋರ್ನಿಯಾದಲ್ಲಿ ವ್ಯಕ್ತಿಯೊಬ್ಬರಿಗೆ ಕೋವಿಡ್‌ ರೂಪಾಂತರ ತಳಿ ಓಮೈಕ್ರಾನ್‌ ಕಾಣಿಸಿಕೊಂಡಿದೆ. ಇದು ಅಮೆರಿಕದಲ್ಲಿ ವರದಿಯಾದ ಮೊದಲ ಪ್ರಕರಣ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

ಕೋವಿಡ್‌ನ ಹೊಸ ತಳಿಯಿಂದ ಎದುರಾಗಬಹುದಾದ ಅಪಾಯಗಳ ಬಗ್ಗೆ ವಿಜ್ಞಾನಿಗಳು ಅಧ್ಯಯನ ನಡೆಸುತ್ತಿರುವ ಹೊತ್ತಿನಲ್ಲೇ ಈ ಪ್ರಕರಣ ಪತ್ತೆಯಾಗಿದೆ.

ಓಮೈಕ್ರಾನ್‌ ಮೊದಲ ಪ್ರಕರಣ ಪತ್ತೆಯಾದ ದಕ್ಷಿಣ ಆಫ್ರಿಕಾದಿಂದ ಅಮೆರಿಕ ಪ್ರಯಾಣವನ್ನು ನಿರ್ಬಂಧಿಸಿತ್ತು. ಹಲವು ದೇಶಗಳಲ್ಲೂ 10ಕ್ಕೂ ಹೆಚ್ಚು ಓಮೈಕ್ರಾನ್‌ ಪ್ರಕರಣಗಳು ಪತ್ತೆಯಾಗಿವೆ.

ADVERTISEMENT

ಮುನ್ನೆಚ್ಚರಿಕೆಯಾಗಿ ಅಮೆರಿಕ ಅಂತರರಾಷ್ಟ್ರೀಯ ಪ್ರಯಾಣಿಕರಿಗೆ ಕಠಿಣ ನಿರ್ಬಂಧಗಳನ್ನು ವಿಧಿಸಿದೆ. ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರಗಳು ಕೋವಿಡ್‌ ಪರೀಕ್ಷಾ ನಿಯಮಗಳನ್ನು ಬಿಗಿಗೊಳಿಸಲು ಕ್ರಮಕೈಗೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.