ಪೆಶಾವರ: ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ನಾಲ್ವರು ಶಂಕಿತ ಭಯೋತ್ಪಾದಕರನ್ನು ಪೊಲೀಸರು ಹತ್ಯೆಗೈದಿದ್ದಾರೆ.
ಭಯೋತ್ಪಾದನಾ ನಿಗ್ರಹ ಪಡೆ ತಡರಾತ್ರಿ ನಡೆಸಿದ ಗುಪ್ತಚರ ಕಾರ್ಯಾಚರಣೆಯಲ್ಲಿ ಆತ್ಮಹತ್ಯಾ ಬಾಂಬರ್ ಮತ್ತು ಆತನ ಸಹಚರನನ್ನು ಹತ್ಯೆ ಮಾಡಲಾಗಿದೆ. ಸೂಕ್ಷ್ಮ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ದೊಡ್ಡ ಪ್ರಮಾಣದಲ್ಲಿ ದಾಳಿ ಮಾಡಲು ಉಗ್ರರು ಸಂಚು ರೂಪಿಸಿದ್ದರು ಎಂದು ಶಂಕಿಸಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ದಾಳಿಯ ಬಳಿಕ ಮದ್ದುಗಂಡುಗಳು, ಪಿಸ್ತೂಲ್ ಸೇರಿದಂತೆ ಹಲವು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಆತ್ಮಹತ್ಯಾ ಬಾಂಬರ್ ಮುನೀರ್ ಅಹ್ಮದ್ ಎಂಬವನನ್ನು ಗುಪ್ತಚರ ಪಡೆಯು ಕಳೆದ ನವೆಂಬರ್‌ನಿಂದ ಹುಡುಕುತ್ತಿತ್ತು ಎಂದು ಅಧಿಕಾರಿ ಸೋಮವಾರ ತಿಳಿಸಿದರು.
ಹಲವು ಅಪರಾಧಗಳಲ್ಲಿ ಭಾಗಿಯಾಗಿ ಅಫ್ಗಾನಿಸ್ತಾನದ ಪೊಲೀಸರಿಗೆ ಬೇಕಾಗಿದ್ದ ಅಹ್ಮದ್, ಖೋಸ್ಟ್‌ನಿಂದ ಪಾಕಿಸ್ತಾನ ಪ್ರವೇಶಿಸಿದ್ದಾನೆ. ವಿಶೇಷ ತನಿಖಾ ತಂಡವು ಪ್ರಕರಣದ ಸಂಬಂಧ ವಿಚಾರಣೆ ನಡೆಸುತ್ತಿದೆ ಎಂದು ಅಧಿಕಾರಿ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.