ADVERTISEMENT

ಪಾಕಿಸ್ತಾನದಲ್ಲಿ 21 ಉಗ್ರರ ಹತ್ಯೆ ಮಾಡಿದ ಭದ್ರತಾ ಪಡೆಗಳು

ಪಿಟಿಐ
Published 1 ಫೆಬ್ರುವರಿ 2024, 12:03 IST
Last Updated 1 ಫೆಬ್ರುವರಿ 2024, 12:03 IST
<div class="paragraphs"><p>ಪಾಕಿಸ್ತಾನ ಭದ್ರತಾ ಪಡೆಗಳು</p></div>

ಪಾಕಿಸ್ತಾನ ಭದ್ರತಾ ಪಡೆಗಳು

   

ಕರಾಚಿ: ನಿಷೇಧಿತ ಪ್ರತ್ಯೇಕತಾವಾದಿ ಸಂಘಟನೆಯೊಂದಿಗೆ ನಂಟು ಹೊಂದಿದ 21 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನದ ಭದ್ರತಾ ಪಡೆಗಳು ಹೇಳಿವೆ.

ಬಲೂಚಿಸ್ತಾನದಲ್ಲಿ ಬುಧವಾರ ಮತ್ತು ಗುರುವಾರ ನಡೆಸಿದ ಕಾರ್ಯಾಚರಣೆಯಲ್ಲಿ 21 ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಭದ್ರತಾ ಪಡೆ ಅಧಿಕಾರಿಗಳು ಹೇಳಿದ್ದಾರೆ.

ADVERTISEMENT

ಬಲೂಚಿಸ್ತಾನದ ಮಾಚ್ ಪಟ್ಟಣದಲ್ಲಿರುವ ಕಾರಾಗೃಹದ ಮೇಲೆ ಈ ಉಗ್ರರು ದಾಳಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ನಮ್ಮ ಸೇನೆಯು ಅವರ ವಿರುದ್ಧ ಕಾರ್ಯಾಚರಣೆ ನಡೆಸಿತ್ತು. ಈ ವೇಳೆ 21 ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. 

ಉಗ್ರರ ವಿರುದ್ಧ ನಡೆದ ಕಾರ್ಯಾಚರಣೆಯಲ್ಲಿ ನಾಲ್ವರು ಭದ್ರತಾ ಸಿಬ್ಬಂದಿ ಹಾಗೂ ಇಬ್ಬರು ನಾಗರಿಕರು ಬಲಿಯಾಗಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.