ಇಸ್ಲಾಮಾಬಾದ್: ಭಾನುವಾರದಿಂದ ಎರಡು ದಿನ ನಡೆದ ಮೂರು ಪ್ರತ್ಯೇಕ ಘರ್ಷಣೆಗಳಲ್ಲಿ ನಿಷೇಧಿತ ತೆಹ್ರೀಕ್–ಎ–ತಾಲಿಬಾನ್ ಪಾಕಿಸ್ತಾನದ (ಟಿಟಿಪಿ) 23 ಉಗ್ರಗಾಮಿಗಳು ಹತರಾಗಿದ್ದಾರೆ. ವಾಯವ್ಯ ಪ್ರಾಂತ್ಯದ ಪ್ರಕ್ಷುಬ್ಧ ಖೈಬರ್ ಪಖ್ತುಂಖ್ವಾ ಪ್ರದೇಶದಲ್ಲಿ ನಡೆದ ಘರ್ಷಣೆಯಲ್ಲಿ ಏಳು ಪಾಕಿಸ್ತಾನಿ ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಸೋಮವಾರ ಸೇನೆಯು ತಿಳಿಸಿದೆ.
ಪಾಕಿಸ್ತಾನ ಸೇನೆಯ ಮಾಧ್ಯಮ ವಿಭಾಗ ಹೊರಡಿಸಿರುವ ಹೇಳಿಕೆ ಪ್ರಕಾರ ‘ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ನಡೆದ ಮೂರು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಸೇನೆಯು 23 ಉಗ್ರರನ್ನು ಹತ್ಯೆ ಮಾಡಿದೆ. ಭಯೋತ್ಪಾದಕರ ಅಡಗುತಾಣಗಳನ್ನು ಸೇನೆಯು ಬೇಧಿಸಿದೆ. ಸೋಮವಾರ ಟೈಂಕ್ ಜಿಲ್ಲೆಯಲ್ಲಿ ನಡೆದ ಘರ್ಷಣೆಯಲ್ಲಿ 10 ಜನ ಭಯೋತ್ಪಾದಕರು ಹತರಾಗಿದ್ದಾರೆ’ ಎಂದು ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.