ಇಸ್ಲಾಮಾಬಾದ್: 47 ಮಂದಿ ಪ್ರಯಾಣಿಕರನ್ನು ಕರೆದೊಯ್ಯುತ್ತಿದ ಪಾಕಿಸ್ತಾನ ಅಂತರಾಷ್ಟ್ರೀಯ ವಿಮಾನ ಸಂಸ್ಥೆಯ (ಪಿಐಎ) ವಿಮಾನ ಬುಧವಾರ ಪತನವಾಗಿದೆ.
ಚಿತ್ರಾಲ್‍ನಿಂದ ಸಂಜೆ 3.30ಕ್ಕೆ ಹೊರಟಿದ್ದ ಪಿಕೆ-661 ವಿಮಾನ ಟೇಕ್ ಆಫ್ ಆಗಿದ್ದ ಕೆಲವೇ ಕ್ಷಣಗಳಲ್ಲಿ ನಿಯಂತ್ರಣ ಕಳೆದುಕೊಂಡು ಕಣ್ಮರೆಯಾಗಿತ್ತು.
ವಿಮಾನದಲ್ಲಿ 5 ಮಂದಿ ವಿಮಾನ ಸಿಬ್ಬಂದಿಗಳು ಸೇರಿದಂತೆ 47 ಮಂದಿ ಇದ್ದರು ಎಂದು ವಿಮಾನ ಸಂಸ್ಥೆ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.