ADVERTISEMENT

ಕಾಬೂಲ್‌: ಆತ್ಮಾಹುತಿ ಬಾಂಬ್‌ ದಾಳಿಗೆ 20 ಬಲಿ

ಏಜೆನ್ಸೀಸ್
Published 5 ಜನವರಿ 2018, 19:30 IST
Last Updated 5 ಜನವರಿ 2018, 19:30 IST

ಕಾಬೂಲ್‌: ಪೂರ್ವ ಕಾಬೂಲ್‌ನಲ್ಲಿ ಗುರುವಾರ ರಾತ್ರಿ ನಡೆದ ಆತ್ಮಾಹುತಿ ಬಾಂಬ್‌ ದಾಳಿಯಲ್ಲಿ 20 ಮಂದಿ ಮೃತಪಟ್ಟು, 27 ಪೊಲೀಸರು ಗಾಯಗೊಂಡಿದ್ದಾರೆ.

ವ್ಯಾಪಾರಿಗಳ ಪ್ರತಿಭಟನೆಯೊಂದಕ್ಕೆ ಭದ್ರತೆ ಒದಗಿಸುವ ಕುರಿತು ಸಮಾಲೋಚನೆ ನಡೆಸಲು ಪೊಲೀಸರು ಸಭೆ ಸೇರಿದ್ದ ವೇಳೆ ಆತ್ಮಾಹುತಿ ಬಾಂಬ್‌ ದಾಳಿ ನಡೆದಿತ್ತು.

ಯಾವುದೇ ಉಗ್ರ ಸಂಘಟನೆ ದಾಳಿಯ ಹೊಣೆ ಹೊತ್ತುಕೊಂಡಿಲ್ಲ. ತಾಲಿಬಾನ್‌ ಮತ್ತು ಇಸ್ಲಾಮಿಕ್‌ ಸ್ಟೇಟ್‌ (ಐಎಸ್‌) ಉಗ್ರ ಸಂಘಟನೆಯ ಜೊತೆ ಸಂಪರ್ಕವಿರುವ ಭಯೋತ್ಪಾದಕರು ಇಲ್ಲಿ ಭದ್ರತಾ ಸಿಬ್ಬಂದಿಯನ್ನು ಗುರಿಯಾಗಿಸಿ ದಾಳಿ ನಡೆಸುತ್ತಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.