ADVERTISEMENT

ಪಾಕ್‌ ಸರ್ಕಾರದ ವಿರುದ್ಧ ಸಯೀದ್‌ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 2 ಫೆಬ್ರುವರಿ 2018, 19:30 IST
Last Updated 2 ಫೆಬ್ರುವರಿ 2018, 19:30 IST

ಲಾಹೋರ್‌: ಕಾಶ್ಮೀರ ವಿಷಯ ಪ್ರಸ್ತಾಪಿಸದಂತೆ ತಡೆಯಲು ಪಾಕಿಸ್ತಾನ ಸರ್ಕಾರವೇ ತನ್ನನ್ನು 10 ತಿಂಗಳ ಕಾಲ ಗೃಹ ಬಂಧನದಲ್ಲಿ ಇರಿಸಿತ್ತು ಎಂದು ಜೆಯುಡಿ ಮುಖ್ಯಸ್ಥ ಹಫೀಜ್‌ ಸಯೀದ್‌ ಹೇಳಿದ್ದಾನೆ. ‘ಕಾಶ್ಮೀರಿಗರ ಮೇಲಿನ ದೌರ್ಜನ್ಯವನ್ನು ಸರ್ಕಾರ ಕಡೆಗಣಿಸಬಾರದು’ ಎಂದು ಆತ ಒತ್ತಾಯಿಸಿದ್ದಾನೆ.

ಕಾಶ್ಮೀರದ ಜನರ ತ್ಯಾಗವನ್ನು ನಮ್ಮ ಸರ್ಕಾರ ಏಕೆ ನಿರ್ಲಕ್ಷಿಸುತ್ತಿದೆ ಎಂಬುದೇ ನನಗೆ ತಿಳಿಯುತ್ತಿಲ್ಲ ಎಂದಿದ್ದಾನೆ.

ಭಾರತ ಮತ್ತು ಅಮೆರಿಕದ ಒತ್ತಡಕ್ಕೆ ಒಳಗಾಗಿ ಪಾಕಿಸ್ತಾನ ಸರ್ಕಾರ ತನ್ನ ವಿರುದ್ಧ ಕ್ರಮ ಕೈಗೊಂಡಿತ್ತು ಎಂದು ಸಯೀದ್‌ ಈ ಹಿಂದೆ
ಆರೋಪಿಸಿದ್ದ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.