ADVERTISEMENT

ತಾಲಿಬಾನ್‌ ದಾಳಿ: 8 ಸಾವು

ಏಜೆನ್ಸೀಸ್
Published 22 ಫೆಬ್ರುವರಿ 2018, 19:30 IST
Last Updated 22 ಫೆಬ್ರುವರಿ 2018, 19:30 IST

ಕಾಬೂಲ್‌ : ಕೇಂದ್ರ ಘಜ್ನಿ ಪ್ರಾಂತ್ಯದಲ್ಲಿನ ಪೊಲೀಸ್‌ ಭದ್ರತಾ ಕೇಂದ್ರದ ಮೇಲೆ ದಾಳಿ ನಡೆಸಿದ ತಾಲಿಬಾನ್‌ ಉಗ್ರರು ಎಂಟು ಪೊಲೀಸರನ್ನು ಹತ್ಯೆ ಮಾಡಿದ್ದಾರೆ.

‘ಬುಧವಾರ ರಾತ್ರಿ ದಾಳಿ ನಡೆಸಲಾಗಿದೆ’ ಎಂದು ಪ್ರಾಂತೀಯ ಗವರ್ನರ್‌ ವಕ್ತಾರ ಅರಿಫ್‌ ನೂರಿ ಹೇಳಿದ್ದಾರೆ.

‘ಭಾರಿ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ಉಗ್ರರು ನಾಲ್ಕು ಕಡೆಯಿಂದ ದಾಳಿ ನಡೆಸಿದ್ದಾರೆ. ಎರಡೂವರೆ ಗಂಟೆ ನಡೆದ ದಾಳಿಯಲ್ಲಿ ಹಲವರು ಗಾಯಗೊಂಡಿದ್ದಾರೆ’ ಎಂದು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.