ಪ್ಯಾಲೆಸ್ಟೀನ್ ಪರ ಘೋಷಣೆ ಕೂಗುತ್ತಾ ವ್ಯಕ್ತಿಯೊಬ್ಬ ಜನರ ಮೇಲೆ ಪೆಟ್ರೋಲ್ ಬಾಂಬ್ ಎಸೆದಿರುವ ಘಟನೆ ಅಮೆರಿಕದ ಕೊಲೊರಾಡೊ ರಾಜ್ಯದ ಬೌಲ್ಡರ್ ನಗರದಲ್ಲಿ ಭಾನುವಾರ ನಡೆದಿದೆ.
ಬೌಲ್ಡರ್: ಪ್ಯಾಲೆಸ್ಟೀನ್ ಪರ ಘೋಷಣೆ ಕೂಗುತ್ತಾ ವ್ಯಕ್ತಿಯೊಬ್ಬ ಜನರ ಮೇಲೆ ಪೆಟ್ರೋಲ್ ಬಾಂಬ್ ಎಸೆದಿರುವ ಘಟನೆ ಅಮೆರಿಕದ ಕೊಲೊರಾಡೊ ರಾಜ್ಯದ ಬೌಲ್ಡರ್ ನಗರದಲ್ಲಿ ಭಾನುವಾರ ನಡೆದಿದೆ.
ಘಟನೆಯಲ್ಲಿ ಏಳು ಜನ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.
ಗಾಜಾದಲ್ಲಿನ ಇಸ್ರೇಲ್ ಒತ್ತೆಯಾಳುಗಳ ಬಗ್ಗೆ ಚರ್ಚಿಸಲು ಇಸ್ರೇಲ್ ಮೂಲದ ನಾಗರಿಕರು ನಗರದ ಜನನಿಬಿಡ ಪಿಯರಲ್ ಸ್ಟ್ರೀಟ್ ಪೆಡೆಸ್ಟ್ರೆಷನ್ ಮಾಲ್ ಬಳಿ ಸಭೆ ಸೇರಿದ್ದರು. ಈ ವೇಳೆ 45 ವರ್ಷದ ಮೊಹಮ್ಮದ್ ಸಬ್ರಿ ಸೋಲಿಮನ್ ಎಂಬುವ ಅರೆನಗ್ನ ಸ್ಥಿತಿಯಲ್ಲಿ ‘ಸ್ವತಂತ್ರ ಪ್ಯಾಲೆಸ್ಟಿನ್’ ಎಂದು ಘೋಷಣೆ ಕೂಗುತ್ತಾ ಎರಡೂ ಕೈಯಲ್ಲಿ ಪೆಟ್ರೋಲ್ ಬಾಂಬ್ ಹಿಡಿದು ಜನರ ಮೇಲೆ ದಾಳಿ ಮಾಡಿದ್ದಾನೆ.
ಸ್ಥಳದಲ್ಲಿ ಕೆಲಹೊತ್ತು ಪ್ರಕ್ರುಬ್ಧ ವಾತಾವರಣ ನಿರ್ಮಾಣವಾಗಿತ್ತು. ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ದಾಳಿಕೋರನನ್ನು ಬಂಧಿಸಲುವಲ್ಲಿ ಯಶಸ್ವಿಯಾಗಿದ್ದಾರೆ.
‘ದಾಳಿಯು ಭಯೋತ್ಪಾದನಾ ಕೃತ್ಯಕ್ಕೆ ಸಮವಾಗಿದೆ’ ಎಂದು ಎಫ್‌ಬಿಐ ನಿರ್ದೇಶಕ ಕಾಶ್ ಪಟೇಲ್ ಅವರು ಹೇಳಿದ್ದಾರೆ.
ಇತ್ತೀಚೆಗೆ ವಾಷಿಂಗ್ಟನ್‌ನಲ್ಲಿ ಇಸ್ರೇಲ್ ರಾಯಭಾರ ಕಚೇರಿಯ ಇಬ್ಬರು ಅಧಿಕಾರಿಗಳನ್ನು ವ್ಯಕ್ತಿಯೊಬ್ಬ ಗುಂಡಿಟ್ಟು ಕೊಂದು ಪರಾರಿಯಾಗಿದ್ದ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.