ADVERTISEMENT

ಪಾಕಿಸ್ತಾನದಲ್ಲಿ ಗುಂಡಿನ ದಾಳಿ: ಆರು ಉಗ್ರರ ಹತ್ಯೆ

ಪಿಟಿಐ
Published 9 ಮಾರ್ಚ್ 2023, 13:12 IST
Last Updated 9 ಮಾರ್ಚ್ 2023, 13:12 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಪೆಶಾವರ: ಪಾಕಿಸ್ತಾನದ ಖೈಬರ್ ಪಖ್ತುಂಕ್ವಾ ಪ್ರಾಂತ್ಯದ ದತ್ತಾ ಖೇಲ್ ಪ್ರದೇಶದಲ್ಲಿ ಗುರುವಾರ ಭದ್ರತಾ ಪಡೆಯ ಗುಂಡಿನ ದಾಳಿಯಿಂದ ಆರು ಜನ ಉಗ್ರರು ಹತ್ಯೆಯಾಗಿದ್ದಾರೆ.

ಬಲಿಯಾದ ಉಗ್ರರು ವಿವಿಧ ಕೃತ್ಯಗಳಲ್ಲಿ ಭಾಗಿಯಾಗಿದ್ದರು. ಭದ್ರತಾ ಪಡೆ ಇವರ ಶೋಧ ಕಾರ್ಯದಲ್ಲಿತ್ತು. ಗುಪ್ತದಳ ಮಾಹಿತಿ ಆಧರಿಸಿ ಗುರುವಾರ ದಾಳಿ ನಡೆಸಲಾಗಿತ್ತು. ಉಗ್ರರ ಬಳಿಯಿದ್ದ ಹಲವು ಶಸ್ತ್ರಾಸ್ತ್ರಗಳನ್ನು ಜಪ್ತಿ ಮಾಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ ಎಂದು ಮಾಧ್ಯಮ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT