ADVERTISEMENT

ಬಲೂಚಿಸ್ತಾನದಲ್ಲಿ ಹೆಲಿಕಾಪ್ಟರ್ ದುರಂತ: 6 ಯೋಧರ ಸಾವು

ಪಿಟಿಐ
Published 26 ಸೆಪ್ಟೆಂಬರ್ 2022, 12:49 IST
Last Updated 26 ಸೆಪ್ಟೆಂಬರ್ 2022, 12:49 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಇಸ್ಲಾಮಾಬಾದ್‌: ಪಾಕಿಸ್ತಾನದ ನೈರುತ್ಯ ಭಾಗದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಭಾನುವಾರ ರಾತ್ರಿ ಹೆಲಿಕಾಪ್ಟರ್‌ ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಆರು ಮಂದಿ ಸೇನಾ ಅಧಿಕಾರಿಗಳು ಮೃತಪಟ್ಟಿದ್ದಾರೆ.

ಮೃತರಲ್ಲಿ ಇಬ್ಬರು ಮೇಜರ್‌ ಶ್ರೇಣಿಯ ಅಧಿಕಾರಿಗಳು ಸೇರಿದ್ದಾರೆ. ಅಪಘಾತಕ್ಕೆ ಕಾರಣ ತಿಳಿದುಬಂದಿಲ್ಲ ಎಂದು ಪಾಕ್‌ ಸೇನೆ ತಿಳಿಸಿದೆ.

ಇದೇ ಪ್ರಾಂತ್ಯದಲ್ಲಿ ಆಗಸ್ಟ್ 1ರಂದು ಇಂತಹದೇ ದುರಂತ ಸಂಭವಿಸಿ ಲೆಫ್ಟಿನೆಂಟ್ ಜನರಲ್ ಸಹಿತ ಆರು ಮಂದಿ ಮೃತಪಟ್ಟಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.