ADVERTISEMENT

ಇಂಡೋನೇಷ್ಯಾದ ಪಶ್ಚಿಮ ಜಾವಾ ಪ್ರಾಂತ್ಯದಲ್ಲಿ ಭೂಕುಸಿತ; 7 ಜನ ಸಾವು, 80 ಜನ ಕಣ್ಮರೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 25 ಜನವರಿ 2026, 3:06 IST
Last Updated 25 ಜನವರಿ 2026, 3:06 IST
<div class="paragraphs"><p>ಇಂಡೋನೇಷ್ಯಾದ ಪಶ್ಚಿಮ ಜಾವಾ ಪ್ರಾಂತ್ಯದಲ್ಲಿ ಭೂಕುಸಿತ; ೭ ಜನ ಸಾವು, ೮೦ ಜನ ಕಣ್ಮರೆ</p></div>

ಇಂಡೋನೇಷ್ಯಾದ ಪಶ್ಚಿಮ ಜಾವಾ ಪ್ರಾಂತ್ಯದಲ್ಲಿ ಭೂಕುಸಿತ; ೭ ಜನ ಸಾವು, ೮೦ ಜನ ಕಣ್ಮರೆ

   

ಬೆಂಗಳೂರು: ಭಾರಿ ಮಳೆಯಿಂದಾಗಿ ಇಂಡೋನೇಷ್ಯಾದ ಪಶ್ಚಿಮ ಜಾವಾ ಪ್ರಾಂತ್ಯದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಏಳು ಜನರು ಮೃತಪಟ್ಟಿದ್ದಾರೆ. ಘಟನೆಯಲ್ಲಿ 80 ಕ್ಕೂ ಹೆಚ್ಚು ಜನರು ಕಾಣೆಯಾಗಿದ್ದಾರೆ ಎಂದು ಆ ದೇಶದ ಪ್ರಾಕೃತಿಕ ವಿಪತ್ತುಗಳ ನಿರ್ವಹಣಾ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ.

ಇಂಡೋನೇಷ್ಯಾ ರಾಜಧಾನಿ ಜಕಾರ್ತಾದ ಆಗ್ನೇಯದಲ್ಲಿರುವ ಪಶ್ಚಿಮ ಬಂಡಂಗ್ ಪ್ರದೇಶದಲ್ಲಿ ಕೆಲವು ದಿನಗಳಿಂದ ಸುರಿಯುತ್ತಿರುವ ತೀವ್ರ ಮಳೆಯ ನಂತರ ಶನಿವಾರ ಬೆಳಿಗ್ಗೆ 2 ಗಂಟೆ ಸುಮಾರು ಭಾರಿ ಭೂಕುಸಿತ ಸಂಭವಿಸಿದೆ.

ADVERTISEMENT

ಭೂಕುಸಿತದಲ್ಲಿ ಮೃತರ ಸಂಖ್ಯೆ ಏರಿಕೆಯಾಗಬಹುದು ಎಂದು ಸ್ಥಳದಲ್ಲಿರುವ ರಕ್ಷಣಾ ಪಡೆ ಹಾಗೂ ಅಧಿಕಾರಿಗಳು ಅಂದಾಜು ಮಾಡಿದ್ದಾರೆ.

ಬಂಡಂಗ್ ಪ್ರದೇಶದಲ್ಲಿ ವಸತಿ ಪ್ರದೇಶಗಳ ಮೇಲೆ ಭೂಕುಸಿತ ಉಂಟಾಗಿದೆ. ಇದೇ ಪ್ರದೇಶದಲ್ಲಿ ಇನ್ನೂ ಹಲವು ಪ್ರದೇಶಗಳಿಗೆ ಭೂಕುಸಿತ, ಪ್ರವಾಹ, ಪ್ರತಿಕೂಲ ಹವಾಮಾನದ ಎಚ್ಚರಿಕೆಗಳನ್ನು ಸಹ ನೀಡಲಾಗಿದೆ.

ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಆಗಾಗ ಭಾರಿ ಮಳೆಯಿಂದ ಕಾರ್ಯಾಚರಣೆಗೆ ಅಡ್ಡಿಯೂ ಉಂಟಾಗುತ್ತಿದೆ ಎಂದು ತಿಳಿದು ಬಂದಿದೆ.

ಬಂಡಂಗ್ ಪ್ರದೇಶದಲ್ಲಿ ಬಹುತೇಕ ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಪ್ರಾಕೃತಿಕ ವಿಪತ್ತುಗಳ ನಿರ್ವಹಣಾ ಪ್ರಾಧಿಕಾರದ ಅಧಿಕಾರಿ ಅಬ್ದುಲ್‌ ಮುಹಾರಿ ಬಿಬಿಸಿ ವಾಹಿನಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.