
ಪ್ರಾತಿನಿಧಿಕ ಚಿತ್ರ
ಕರಾಚಿ: ‘ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ಭದ್ರತಾ ಪಡೆಗಳು, ಪೊಲೀಸರು ಮತ್ತು ನಾಗರಿಕರ ಮೇಲೆ ದಾಳಿ ನಡೆಸಿದ 70 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಇವರಲ್ಲಿ ಬಲೂಚಿಸ್ತಾನ ವಿಮೋಚನಾ ಸೇನೆಗೆ (ಬಿಎಲ್‌ಎ) ಸೇರಿದವರೂ ಇದ್ದಾರೆ’ ಎಂದು ಅಧಿಕಾರಿಗಳು ಶನಿವಾರ ಹೇಳಿದರು.
ಭದ್ರತಾ ಪಡೆಗಳ ಮೂಲಗಳ ಪ್ರಕಾರ, 108 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಆದರೆ, ಬಲೂಚಿಸ್ತಾನದ ಮುಖ್ಯಮಂತ್ರಿ ಸರ್ಫರಾಜ್ ಬುಗ್ತಿ ಅವರು ‘ಎಕ್ಸ್’ನಲ್ಲಿ ಪೋಸ್ಟ್ ಹಂಚಿಕೊಂಡು, ‘70 ಭಯೋತ್ಪಾದಕರು ಮೃತಪಟ್ಟಿದ್ದಾರೆ’ ಎಂದು ಮಾಹಿತಿ ನೀಡಿದ್ದಾರೆ.
ಗುರುವಾರ ಮತ್ತು ಶುಕ್ರವಾರದಂದು ಭಯೋತ್ಪಾದಕರು ದಾಳಿ ನಡೆಸಿದ್ದರು. ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆಗಳು ವಿವಿಧ ಸ್ಥಳಗಳಲ್ಲಿ ಕಾರ್ಯಾಚರಣೆ ನಡೆಸಿ ಭಯೋತ್ಪಾದಕರನ್ನು ಹತ್ಯೆ ಮಾಡಿದ್ದಾರೆ. ಈ ವೇಳೆ 10 ಮಂದಿ ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದಾರೆ. ಶುಕ್ರವಾರ ರಾತ್ರಿ ಆರಂಭವಾಗಿರುವ ಕಾರ್ಯಾಚರಣೆಯು ಶನಿವಾರ ರಾತ್ರಿಯೂ ಮುಂದುವರಿದಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.