ADVERTISEMENT

ಟರ್ಕಿ ಭೂಕಂಪ: ಮೃತರ ಸಂಖ್ಯೆ 49ಕ್ಕೆ ಏರಿಕೆ

ಏಜೆನ್ಸೀಸ್
Published 1 ನವೆಂಬರ್ 2020, 8:29 IST
Last Updated 1 ನವೆಂಬರ್ 2020, 8:29 IST
ಇಜ್ಮಿರ್‌ನಲ್ಲಿ ಮುಂದುವರಿದ ರಕ್ಷಣಾ ಕಾರ್ಯಚರಣೆ
ಇಜ್ಮಿರ್‌ನಲ್ಲಿ ಮುಂದುವರಿದ ರಕ್ಷಣಾ ಕಾರ್ಯಚರಣೆ   

ಇಜ್ಮಿರ್‌ (ಟರ್ಕಿ): ಟರ್ಕಿಯ ಕರಾವಳಿ ಮತ್ತು ಗ್ರೀಕ್ ದ್ವೀಪ ಸಮೋಸ್ ಮಧ್ಯಭಾಗದಲ್ಲಿ ಶುಕ್ರವಾರ ಸಂಭವಿಸಿದ್ದ ಪ್ರಬಲ ಭೂಕಂಪದಲ್ಲಿ ಮೃತರ ಸಂಖ್ಯೆ 49ಕ್ಕೆ ಏರಿದ್ದು, 900ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಪಶ್ಚಿಮ ಟರ್ಕಿಯಲ್ಲಿ ಕಟ್ಟಡದ ಅವಶೇಷಗಳಡಿ ಸಿಲುಕಿದ್ದ 70 ವರ್ಷದ ವೃದ್ಧರೊಬ್ಬರನ್ನು ಭಾನುವಾರ ಸುರಕ್ಷಿತವಾಗಿ ಹೊರತೆಗೆಯಲಾಗಿದೆ.

ಅವಶೇಷಗಳಡಿ ಸಿಲುಕಿದವರನ್ನು ಹೊರ ತೆಗೆಯುತ್ತಿದ್ದಂತೆ ಮೃತರ ಸಂಖ್ಯೆಯು ಹೆಚ್ಚುತ್ತಿದ್ದು, ಇಜ್ಮಿರ್‌ನಲ್ಲಿ ಸತ್ತವರ ಸಂಖ್ಯೆ 44ಕ್ಕೆ ಏರಿಕೆಯಾಗಿದೆ ಎಂದು ಟರ್ಕಿಯ ವಿಪತ್ತು ಮತ್ತು ತುರ್ತುಸ್ಥಿತಿ ನಿರ್ವಹಣಾ ಪ್ರೆಸಿಡೆನ್ಸಿ ತಿಳಿಸಿದೆ.

ADVERTISEMENT

ಏಜಿಯನ್ ಈಶಾನ್ಯ ಭಾಗದ ಸಮೋಸ್‌ನಲ್ಲಿ ಶುಕ್ರವಾರ ಮಧ್ಯಾಹ್ನ 6.9 ತೀವ್ರತೆಯ ಭೂಕಂಪ ಸಂಭವಿಸಿತ್ತು. ಇದರ ಕೇಂದ್ರಬಿಂದು 16.ಕಿ.ಮೀ ಆಳದಲ್ಲಿ ಪತ್ತೆಯಾಗಿತ್ತು.

ಇಜ್ಮಿರ್‌ನ ಸೆಫೆರಿಹಿಸರ್ ಜಿಲ್ಲೆಯಲ್ಲಿ ಸಣ್ಣ ಸುನಾಮಿ ಸಂಭಿಸಿದ್ದು, ಗ್ರೀಕ್‌ ದ್ವೀಪದಲ್ಲಿ ಒಬ್ಬ ವೃದ್ಧೆ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ.

70 ವರ್ಷದ ಅಹ್ಮೆತ್ ಸಿಟಿಮ್‌ ಎಂಬವರನ್ನು ಭಾನುವಾರ ಅವಶೇಷಗಳಡಿಯಿಂದ ಹೊರತೆಗೆಯಲಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಟರ್ಕಿಯ ಆರೋಗ್ಯ ಸಚಿವ ಫಹ್ರೆಟಿನ್ ಕೋಕಾ ತಿಳಿಸಿದ್ದಾರೆ.

ಟರ್ಕಿ, ಇಸ್ತಾನ್‌ಬುಲ್‌ ಮತ್ತು ಗ್ರೀಕ್‌ ರಾಜಧಾನಿ ಅಥೇನ್ಸ್‌ನಲ್ಲಿಯೂ ಶುಕ್ರವಾರ ಭೂಕಂಪನವಾಗಿದ್ದು, ಮೂರನೇ ದಿನವು ರಕ್ಷಣಾ ಪಡೆಯು ಶೋಧ ಕಾರ್ಯಾಚರಣೆ ಮುಂದುವರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.