ADVERTISEMENT

ಅಸ್ಟ್ರಾಜೆನೆಕಾ ಲಸಿಕೆ: ಬ್ರಿಟನ್‌ನಲ್ಲಿ 19 ಸಾವು

AstraZeneca jab

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2021, 16:54 IST
Last Updated 7 ಏಪ್ರಿಲ್ 2021, 16:54 IST
ಅಸ್ಟ್ರಾಜೆನೆಕಾ ಲಸಿಕೆ
ಅಸ್ಟ್ರಾಜೆನೆಕಾ ಲಸಿಕೆ   

ಲಂಡನ್‌ (ಎಎಫ್‌ಪಿ): ಬ್ರಿಟನ್‌ನಲ್ಲಿ ಅಸ್ಟ್ರಾಜೆನೆಕಾ ಲಸಿಕೆ ಪಡೆದವರಲ್ಲಿ 79 ಮಂದಿಗೆ ಅಪರೂಪದ ರಕ್ತ ಹೆಪ್ಪುಗಟ್ಟುವಿಕೆ ತೊಂದರೆ ಕಾಣಿಸಿಕೊಂಡಿದ್ದು, ಇದರಲ್ಲಿ 19 ಮಂದಿ ಮೃತಪಟ್ಟಿದ್ದಾರೆ ಎಂದು ದೇಶದ ಔಷಧ ನಿಯಂತ್ರಕ ಸಂಸ್ಥೆ ಬುಧವಾರ ತಿಳಿಸಿದೆ.

‘ದೇಶದಲ್ಲಿ ಮಾರ್ಚ್ 31ರ ಹೊತ್ತಿಗೆ 20 ಮಿಲಿಯನ್ ಡೋಸ್‌ಗಳನ್ನು ನೀಡಲಾಗಿದೆ. ರಕ್ತ ಹೆಪ್ಪುಗಟ್ಟುವಿಕೆಯ 79 ಪ್ರಕರಣಗಳು ವರದಿಯಾಗಿವೆ. 79 ಪ್ರಕರಣಗಳಲ್ಲಿ 19 ಜನರು ಸಾವನ್ನಪ್ಪಿದ್ದಾರೆ’ ಎಂದು ಔಷಧ ಮತ್ತು ಆರೋಗ್ಯ ಉತ್ಪನ್ನಗಳ ನಿಯಂತ್ರಣ ಸಂಸ್ಥೆ (ಎಂಎಚ್‌ಆರ್‌ಎ) ಮುಖ್ಯ ಕಾರ್ಯನಿರ್ವಾಹಕ ಜೂನ್ ರೈನ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT