ಮಳೆ ( ಪಾತ್ರಿನಿಧಿಕ ಚಿತ್ರ)
ಪಿಟಿಐ ಚಿತ್ರ
ಪೆಶಾವರ: ವಾಯುವ್ಯ ಪಾಕಿಸ್ತಾನದ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದ್ದು, ಮಳೆ ಸಂಬಂಧಿತ ಅವಘಡಗಳಲ್ಲಿ ಇಬ್ಬರು ಮಕ್ಕಳು ಸೇರಿದಂತೆ 8 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
ಡೇರಾ, ಇಸ್ಮಾಯಿಲ್ ಖಾನ್, ಬನ್ನು, ಮನ್ಸೆಹ್ರಾ ಮತ್ತು ಮೊಹ್‌ಮಂಡ್ ಜಿಲ್ಲೆಗಳಲ್ಲಿ ನಿರಂತರ ಮಳೆಯಾಗಿದೆ ಎಂದು ವಿಪತ್ತು ನಿರ್ವಹಣಾ ಪ್ರಾಧಿಕಾರದ (ಪಿಡಿಎಂಎ) ಅಧಿಕಾರಿಗಳು ಹೇಳಿದ್ದಾರೆ.
ಬನ್ನುವಿನಲ್ಲಿ ಮನೆ ಮೇಲ್ಛಾವಣಿ ಕುಸಿದು ಸಹೋದರಿಯರಿಬ್ಬರು ಮೃತಪಟ್ಟಿದ್ದಾರೆ. ಡೇರಾ ಇಸ್ಮಾಯಿಲ್ ಖಾನ್ ಜಿಲ್ಲೆಯಲ್ಲಿ ತಾಯಿ ಹಾಗೂ ಬಾಲಕ ಮೃತಪಟ್ಟರೆ, ಮತ್ತೊಂದೆಡೆ ಹರಿಯುವ ನೀರಿನಲ್ಲಿ ಹೆಣ್ಣು ಮಗುವೊಂದು ಕೊಚ್ಚಿ ಹೋಗಿದೆ ಎಂದು ವರದಿಯಾಗಿದೆ.
ಮಳೆ ಸಂಬಂಧಿತ ಅವಘಡಗಳಲ್ಲಿ ಮೊಹಮಂಡ್ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ಹಾಗೂ ಮನ್ಸೆಹ್ರಾದಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಾರಿ ಮಳೆಯಾದ ಪರಿಣಾಮ ಸಾಕಷ್ಟು ಪ್ರಮಾಣದಲ್ಲಿ ಬೆಳೆಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.