ADVERTISEMENT

ಪಾಕಿಸ್ತಾನದಲ್ಲಿ ಹಿಂದೂ ದೇವಾಲಯ ಧ್ವಂಸ: 8 ಪೊಲೀಸರ ಅಮಾನತು

ಪಿಟಿಐ
Published 3 ಜನವರಿ 2021, 15:20 IST
Last Updated 3 ಜನವರಿ 2021, 15:20 IST
ಧ್ವಂಸಗೊಂಡಿರುವ ಹಿಂದೂ ದೇಗುಲವನ್ನು ಪರಿಶೀಲಿಸುತ್ತಿರುವ ಪೊಲೀಸರು (ಎಎಫ್‌ಪಿ ಚಿತ್ರ)
ಧ್ವಂಸಗೊಂಡಿರುವ ಹಿಂದೂ ದೇಗುಲವನ್ನು ಪರಿಶೀಲಿಸುತ್ತಿರುವ ಪೊಲೀಸರು (ಎಎಫ್‌ಪಿ ಚಿತ್ರ)   

ಪೆಶಾವರ: ಪಾಕಿಸ್ತಾನದ ಖೈಬರ್‌ ಪಖ್ತುಂಖ್ವಾ ಪ್ರಾಂತ್ಯದ ತೆರಿ ಗ್ರಾಮದಲ್ಲಿನ ಹಿಂದೂ ದೇವಾಲಯವನ್ನು ಧ್ವಂಸಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಪೊಲೀಸ್ ಅಧಿಕಾರಿಗಳನ್ನು ಭಾನುವಾರ ಅಮಾನತು ಮಾಡಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ 100 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಹಿಂದೂ ದೇವಾಲಯದ ನವೀಕರಣವನ್ನು ಜಮಿಯತ್ ಉಲೆಮಾ ಇ–ಇಸ್ಲಾಂ ಪಕ್ಷದ ಬೆಂಬಲಿಗರು ವಿರೋಧಿಸಿ, ದೇವಾಲಯವನ್ನು ಧ್ವಂಸಗೊಳಿಸಿ ಬೆಂಕಿ ಹಚ್ಚಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ 350ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದ್ದು, ಎಲ್ಲರನ್ನೂ ಶೀಘ್ರದಲ್ಲೇ ಬಂಧಿಸಲಾಗುವುದು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಹೀರ್ ಷಾ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.