ADVERTISEMENT

ಅಮೆರಿಕ: ಮತ್ತೆ 90 ವಿದ್ಯಾರ್ಥಿಗಳ ಬಂಧನ

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2019, 12:22 IST
Last Updated 28 ನವೆಂಬರ್ 2019, 12:22 IST
   

ವಾಷಿಂಗ್ಟನ್‌ (ಪಿಟಿಐ): ಅಮೆರಿಕದ ನಕಲಿ ವಿಶ್ವವಿದ್ಯಾಲಯದಲ್ಲಿ ನೋಂದಾಯಿಸಿಕೊಂಡಿದ್ದ 90 ವಿದೇಶಿ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದು, ಇವರಲ್ಲಿ ಬಹುತೇಕರು ಭಾರತೀಯರು ಎಂದು ಮಾಧ್ಯಮವೊಂದು ವರದಿ ಮಾಡಿದೆ.

ವಲಸೆ ಮತ್ತು ಸುಂಕ ಜಾರಿ ಇಲಾಖೆ (ಐಸಿಇ) ಈವರೆಗೆ 250 ವಿದ್ಯಾರ್ಥಿಗಳನ್ನು ಬಂಧಿಸಿದೆ. ಈಗಾಗಲೇ ಬಂದ್‌ ಆಗಿರುವ ಫಾರ್ಮಿಂಗ್ಟನ್‌ ವಿಶ್ವವಿದ್ಯಾಲಯದಲ್ಲಿ ಈ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಕಳೆದ ಮಾರ್ಚ್‌ನಲ್ಲಿ 161 ವಿದ್ಯಾರ್ಥಿಗಳನ್ನು ಬಂಧಿಸಲಾಗಿತ್ತು. ಇವರಲ್ಲಿ ಬಹುತೇಕರು ಭಾರತೀಯರಿದ್ದಾರೆ.

ಬಂಧನಕ್ಕೊಳಗಾಗಿರುವ 250 ವಿದ್ಯಾರ್ಥಿಗಳ ಪೈಕಿ ಶೇ 80 ರಷ್ಟು ಮಂದಿಗೆ ಸ್ವಯಂಪ್ರೇರಿತರಾಗಿ ಅಮೆರಿಕ ಬಿಟ್ಟು ಹೋಗಲು ಅನುಮತಿ ನೀಡಲಾಗಿದ್ದು, ಅವರೆಲ್ಲರೂ ತಮ್ಮ ದೇಶಗಳಿಗೆ ತೆರಳಿದ್ದಾರೆ. ಉಳಿದ ಶೇ 20 ವಿದ್ಯಾರ್ಥಿಗಳಿಗೂ ಅಮೆರಿಕ ತೊರೆಯಲು ಅಂತಿಮ ಆದೇಶ ನೀಡಲಾಗಿದೆ ಎಂದು ಐಸಿಇ ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಅಮೆರಿಕದಲ್ಲಿ ಅಕ್ರಮವಾಗಿ ವಾಸಿಸಲು ನಕಲಿ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ. ಈ ವಿದ್ಯಾರ್ಥಿಗಳಿಗೆ ವಾಸಿಸಲು ನೆರವು ನೀಡಿದ ಜಾಲದ ಎಂಟು ಮಂದಿಯನ್ನು ಬಂಧಿಸಿದ್ದು, ಅವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.