ADVERTISEMENT

ಚೀನಾಕ್ಕೆ ಪ್ರತಿಸ್ಪರ್ಧಿಯಾಗಿ ಭಾರತ ನಿಲ್ಲಬಲ್ಲದು: ಶ್ವೇತಭವನ

ಪಿಟಿಐ
Published 13 ಜನವರಿ 2021, 7:15 IST
Last Updated 13 ಜನವರಿ 2021, 7:15 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ವಾಷಿಂಗ್ಟನ್‌: ಭಾರತ ಹಿಂದೂಮಹಾಸಾಗರ–ಪೆಸಿಫಿಕ್‌ ಪ್ರದೇಶದಲ್ಲಿ ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮುತ್ತಿದೆ. ಸಮಾನ ಮನಸ್ಕ ದೇಶಗಳೊಂದಿಗೆ ಮೈತ್ರಿ ಹೊಂದಿದ ಭಾರತ, ಚೀನಾಕ್ಕೆ ‍ಪ್ರತಿಸ್ಪರ್ಧಿಯಾಗಿ ನಿಲ್ಲಬಲ್ಲದು ಎಂದು ಶ್ವೇತಭವನ ಅಭಿಪ್ರಾಯಪಟ್ಟಿದೆ.

ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರ ರಾಬರ್ಟ್‌ ಒಬ್ರಿಯಾನ್‌ ಅವರು 10 ಪುಟಗಳ ಈ ದಾಖಲೆಯನ್ನು ಇತ್ತೀಚೆಗೆ ಶ್ವೇತಭವನದ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದ್ದಾರೆ. ಇಂಡೊ–ಪೆಸಿಫಿಕ್‌ ಪ್ರದೇಶದಲ್ಲಿ ಅಭಿವೃದ್ಧಿ, ಸ್ಥಿರತೆ ಕಾಪಾಡುವಲ್ಲಿ ಭಾರತ ಪ್ರಮುಖ ಪಾತ್ರ ವಹಿಸಲಿದೆ ಎಂದು ಈ ದಾಖಲೆಗಳಲ್ಲಿ ವಿವರಿಸಲಾಗಿದೆ.

ಭದ್ರತೆ ವಿಷಯದಲ್ಲಿ ಭಾರತ ಮತ್ತು ಅಮೆರಿಕ ಸ್ನೇಹ ಗಟ್ಟಿಯಾಗಿದೆ. ದಕ್ಷಿಣ ಮತ್ತು ಆಗ್ನೇಯ ಏಷ್ಯಾದಲ್ಲಿ ಚೀನಾದ ಪ್ರಭಾವ, ಆಕ್ರಮಣಶೀಲತೆಯನ್ನು ತಗ್ಗಿಸಲು ಭಾರತ ಮತ್ತು ಅಮೆರಿಕ ಜಂಟಿಯಾಗಿ ಕಾರ್ಯ ನಿರ್ವಹಿಸುವ ಅಗತ್ಯ ಇದೆ ಎಂದೂ ಹೇಳಲಾಗಿದೆ.

ADVERTISEMENT

ಗಡಿ ವಿಷಯವಾಗಿ ಚೀನಾದೊಂದಿಗೆ ಉಂಟಾಗಿರುವ ಸಂಘರ್ಷಮಯ ಸ್ಥಿತಿಯನ್ನು ನಿಭಾಯಿಸುವ ಸಾಮರ್ಥ್ಯವನ್ನೂ ಭಾರತ ಹೊಂದಿದೆ ಎಂದು ಈ ದಾಖಲೆಗಳಲ್ಲಿ ವಿವರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.