ADVERTISEMENT

ದುಬೈ ವಿಮಾನನಿಲ್ದಾಣ ಕಾರ್ಯಾಚರಣೆ ಮತ್ತೆ ಆರಂಭ

ಪಿಟಿಐ
Published 24 ಏಪ್ರಿಲ್ 2024, 0:17 IST
Last Updated 24 ಏಪ್ರಿಲ್ 2024, 0:17 IST
-
-   

ದುಬೈ: ಹಿಂದೆಂದೂ ಕಾಣದಂತಹ ಮಳೆಯಿಂದಾಗಿ ಕಾರ್ಯಾಚರಣೆ ಸ್ಥಗಿತಗೊಳಿಸಿದ್ದ ದುಬೈ ಅಂತರರಾಷ್ಟ್ರೀಯ ವಿಮಾನನಿಲ್ದಾಣವು ಈಗ ಪೂರ್ಣ ಪ್ರಮಾಣದಲ್ಲಿ ಮತ್ತೆ ಕಾರ್ಯಾಚರಿಸುತ್ತಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

‘ಯುಎಇಯಲ್ಲಿ ಕಳೆದ 75 ವರ್ಷಗಳಲ್ಲಿಯೇ ಸುರಿದ ಭಾರಿ ಮಳೆ ಪರಿಣಾಮ ದುಬೈ ಅಂತರರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ ನೀರು ನಿಂತು ಸಮಸ್ಯೆಯಾಗಿತ್ತು. ತ್ವರಿತ ಕ್ರಮ ಕೈಗೊಳ್ಳುವ ಮೂಲಕ ಕಾರ್ಯಾಚರಣೆಯನ್ನು ಮರುಸ್ಥಾಪಿಸಲಾಗಿದೆ’ ದುಬೈ ಅಂತರರಾಷ್ಟ್ರೀಯ ವಿಮಾನನಿಲ್ದಾಣವು ಪ್ರಕಟಣೆಯಲ್ಲಿ ತಿಳಿಸಿದೆ.

ಕಳೆದ ಮಂಗಳವಾರ ಸಂಜೆ ಸುರಿದ ಭಾರಿ ಮಳೆ ಪರಿಣಾಮ, ಸಾವಿರಾರು ಜನ ಪ್ರಯಾಣಿಕರು ವಿಮಾನನಿಲ್ದಾಣದಲ್ಲಿ ಸಿಲುಕಿ, ತೊಂದರೆ ಅನುಭವಿಸುವಂತಾಗಿತ್ತು. ರನ್‌ವೇ ಸೇರಿದಂತೆ ವಿಮಾನನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ಭಾರಿ ಪ್ರಮಾಣದಲ್ಲಿ ನೀರು ನಿಂತಿದ್ದರಿಂದ ವಿಮಾನನಿಲ್ಧಾಣದ ಒಳಗೆ ಅಥವಾ ಹೊರಗೆ ಹೋಗಲು ಸಾಧ್ಯವೇ ಇಲ್ಲ ಎಂಬಂತಹ ಸ್ಥಿತಿ ನಿರ್ಮಾಣವಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.