ADVERTISEMENT

ಅಫ್ಘಾನಿಸ್ತಾನದಲ್ಲಿ ಬಾಂಬ್ ಸ್ಫೋಟ: ಮೃತರ ಸಂಖ್ಯೆ 8ಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 2 ಏಪ್ರಿಲ್ 2022, 10:16 IST
Last Updated 2 ಏಪ್ರಿಲ್ 2022, 10:16 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಕಾಬೂಲ್: ಅಫ್ಘಾನಿಸ್ತಾನದ ಪಶ್ಚಿಮ ಭಾಗದ ಹೆರಾತ್ ಪ್ರಾಂತ್ಯದಲ್ಲಿ ಪ್ರಬಲ ಕಾರು ಬಾಂಬ್ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆಯಾಗಿದ್ದು 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಶುಕ್ರವಾರ ತಡರಾತ್ರಿ ಈ ಸ್ಫೋಟ ನಡೆದಿದ್ದು ಮೃತರ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ಈ ಘಟನೆ ಸಂಬಂಧ ಯಾವುದೇ ಸಂಘಟನೆ ಸ್ಫೋಟದ ಹೊಣೆ ಹೊತ್ತಿಲ್ಲ.

ಇಂದು ಫಿರಂಗಿ ಸ್ಫೋಟ

ADVERTISEMENT

ಇಲ್ಲಿನ ಹೆಲ್ಮಂಡ್ ಪ್ರಾಂತ್ಯದಲ್ಲಿ ಫಿರಂಗಿ ಸ್ಫೋಟವಾಗಿ ಐದು ಮಕ್ಕಳು ಮೃತಪಟ್ಟಿದ್ದಾರೆ. ಈ ಘಟನೆ ಮರ್ಜಾ ಜಿಲ್ಲೆಯಲ್ಲಿ ನಡೆದಿದ್ದು ಇಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.