ಸಿಂಗಪುರ: ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ಪತನಗೊಂಡು 241 ಪ್ರಯಾಣಿಕರು ಮೃತಪಟ್ಟಿದ್ದು, ಮೃತರಿಗೆ ಸಂತಾಪ ಸೂಚಿಸಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಿಂಗಪುರ ಪ್ರಧಾನಿ ಲ್ಯಾವರೆನ್ಸ್ ವಾಂಗ್ ಪತ್ರ ಬರೆದಿದ್ದಾರೆ.
ಗುರುವಾರ ನಡೆದ ಅಪಘಾತದಲ್ಲಿ ಪ್ರಯಾಣಿಕರು, ವಿಮಾನ ಸಿಬ್ಬಂದಿ ಹಾಗೂ ನಾಗರಿಕರು ಸೇರಿದಂತೆ ಕನಿಷ್ಠ 265 ಜನರು ಮೃತಪಟ್ಟಿದ್ದಾರೆ.
'ಜೂನ್ 12ರಂದು ನಡೆದ ಏರ್ ಇಂಡಿಯಾ ಎಐ171 ವಿಮಾನ ಅಪಘಾತದ ಸುದ್ದಿ ತಿಳಿದು ತೀವ್ರ ದುಃಖವಾಯಿತು. ಸಿಂಗಪುರ ಸರ್ಕಾರದ ಪರವಾಗಿ, ದುರ್ಘಟನೆಯಲ್ಲಿ ಮೃತಪಟ್ಟವರಿಗೆ ಹಾಗೂ ಅವರ ಕುಟುಂಬದವರಿಗೆ ತೀವ್ರ ಸಂತಾಪವನ್ನು ಸೂಚಿಸುತ್ತೇವೆ. ದುಃಖದ ಸಮಯದಲ್ಲಿ ಭಾರತದ ಜೊತೆಗೆ ಸಿಂಗಪುರವಿರಲಿದೆ’ಎಂದು ಪತ್ರದಲ್ಲಿ ಬರೆದಿದ್ದಾರೆ.
ಸಿಂಗಪುರದ ವಿದೇಶಾಂಗ ಸಚಿವ ವಿವಿಯನ್ ಬಾಲಕೃಷ್ಣನ್ ಅವರು ಕೂಡ ಸಂತಾಪ ಸೂಚಿಸಿ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರಿಗೆ ಪತ್ರ ಬರೆದಿದ್ದಾರೆ.
ಅಹಮದಾಬಾದ್‌ನಿಂದ ಲಂಡನ್‌ಗೆ ತೆರಳಬೇಕಿದ್ದ ವಿಮಾನವು ಟೇಕ್‌ಆಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡು ವೈದ್ಯಕೀಯ ವಿದ್ಯಾರ್ಥಿಗಳ ಹಾಸ್ಟೆಲ್ ಕಟ್ಟಡದ ಮೇಲೆ ಅಪ್ಪಳಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.