ADVERTISEMENT

AI Action Summit: ಫ್ರಾನ್ಸ್‌ಗೆ ಬಂದಿಳಿದ ಪ್ರಧಾನಿ ಮೋದಿಗೆ ಮ್ಯಾಕ್ರನ್ ಸ್ವಾಗತ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 11 ಫೆಬ್ರುವರಿ 2025, 1:58 IST
Last Updated 11 ಫೆಬ್ರುವರಿ 2025, 1:58 IST
<div class="paragraphs"><p>ಎಮಾನ್ಯುಯೆಲ್ ಮ್ಯಾಕ್ರನ್, ನರೇಂದ್ರ ಮೋದಿ</p></div>

ಎಮಾನ್ಯುಯೆಲ್ ಮ್ಯಾಕ್ರನ್, ನರೇಂದ್ರ ಮೋದಿ

   

(ಚಿತ್ರ ಕೃಪೆ: X/@narendramodi)

ಪ್ಯಾರಿಸ್: ಭಾರತ ಪ್ರಧಾನಿ ನರೇಂದ್ರ ಮೋದಿ ಅವರು ಮೂವರು ದಿನಗಳ ಫ್ರಾನ್ಸ್ ಪ್ರವಾಸವನ್ನು ಕೈಗೊಂಡಿದ್ದಾರೆ. ಪ್ರಧಾನಿ ಮೋದಿ ಅವರನ್ನು ಫ್ರಾನ್ಸ್‌ನ ಅಧ್ಯಕ್ಷ ಎಮಾನ್ಯುಯೆಲ್ ಮ್ಯಾಕ್ರನ್ ಬರಮಾಡಿಕೊಂಡಿದ್ದಾರೆ.

ADVERTISEMENT

ಫ್ರಾನ್ಸ್‌ನಲ್ಲಿ ಮ್ಯಾಕ್ರನ್ ಜೊತೆಗೂಡಿ 'ಎ.ಐ ಆ್ಯಕ್ಷನ್ ಶೃಂಗ'ದಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಮೋದಿ, 'ಪ್ಯಾರಿಸ್‌ನಲ್ಲಿ ಬಂದಿಳಿದಿದ್ದೇನೆ. ಎಐ, ತಂತ್ರಜ್ಞಾನ ಮತ್ತು ಭವಿಷ್ಯದ ವಲಯಗಳ ಮೇಲೆ ಗಮನ ಕೇಂದ್ರೀಕರಿಸುವ ವಿವಿಧ ಕಾರ್ಯಕ್ರಮಗಳನ್ನು ಎದುರು ನೋಡುತ್ತಿದ್ದೇನೆ' ಎಂದು ಹೇಳಿದ್ದಾರೆ.

ಗೌರವ ವಂದನೆಗಳೊಂದಿಗೆ ಪ್ರಧಾನಿ ಮೋದಿ ಅವರನ್ನು ಫ್ರಾನ್ಸ್‌ನಲ್ಲಿ ಬರಮಾಡಿಕೊಳ್ಳಲಾಯಿತು. ಫ್ರಾನ್ಸ್‌ನಲ್ಲಿರುವ ಭಾರತೀಯ ಸಮುದಾಯದವರು ಮೋದಿ ಅವರನ್ನು ಸ್ವಾಗತಿಸಿದರು. ಅವರಿಗೂ ಮೋದಿ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

ಮಗದೊಂದು ಪೋಸ್ಟ್‌ನಲ್ಲಿ 'ನನ್ನ ಸ್ನೇಹಿತ ಮ್ಯಾಕ್ರನ್ ಅವರನ್ನು ಭೇಟಿಯಾಗಲು ಸಂತಸಗೊಂಡಿದ್ದೇನೆ' ಎಂದು ಮ್ಯಾಕ್ರನ್ ಅವರನ್ನು ತಬ್ಬಿಕೊಂಡಿರುವ ಚಿತ್ರವನ್ನು ಮೋದಿ ಹಂಚಿದ್ದಾರೆ.

ಮೋದಿ ಅವರನ್ನು ಸ್ವಾಗತಿಸುತ್ತಾ ಮ್ಯಾಕ್ರನ್ ಅವರು ಪೋಸ್ಟ್ ಮಾಡಿದ್ದಾರೆ. 'ನನ್ನ ಗೆಳೆಯ ಮೋದಿ ಅವರಿಗೆ ಪ್ಯಾರಿಸ್‌ಗೆ ಸ್ವಾಗತ. ಅಮೆರಿಕದ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಅವರಿಗೂ ಸ್ವಾಗತ. ಎ.ಐ ಆ್ಯಕ್ಷನ್ ಶೃಂಗದಲ್ಲಿ ಭಾಗವಹಿಸುವ ನಮ್ಮೆಲ್ಲ ಪಾಲುದಾರರಿಗೆ ಸುಸ್ವಾಗತ' ಎಂದು ಹೇಳಿದ್ದಾರೆ.

ಫ್ರಾನ್ಸ್ ಅಧ್ಯಕ್ಷ ಎಮಾನ್ಯುಯೆಲ್ ಮ್ಯಾಕ್ರನ್ ಅವರೊಂದಿಗೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆಯಲ್ಲಿ ಭಾಗವಹಿಸಲಿದ್ದಾರೆ.

ಉಭಯ ನಾಯಕರು ಮಾರ್ಸೆ ನಗರದಲ್ಲಿನ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಲಿದ್ದಾರೆ. ಅಲ್ಲಿ ಅವರು ಮೊದಲ ಮಹಾಯುದ್ಧದಲ್ಲಿ ಹುತಾತ್ಮರಾದ ಭಾರತೀಯ ಸೈನಿಕರಿಗೆ ಗೌರವ ಸಲ್ಲಿಸಲಿದ್ದಾರೆ.

ಮಾರ್ಸೆ ನಗರದಲ್ಲಿ ಭಾರತದ ನೂತನ ಕಾನ್ಸುಲೇಟ್ ಜನರಲ್ ಕಚೇರಿಯನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.