ADVERTISEMENT

ಮ್ಯಾನ್ಮಾರ್: ಬಂಡುಕೋರರನ್ನು ಗುರಿಯಾಗಿಸಿ‌ ವಾಯುದಾಳಿ; 11 ಮಕ್ಕಳು ಸಾವು

ಮ್ಯಾನ್ಮಾರ್‌ನಲ್ಲಿ ನಡೆದ ವಾಯುದಾಳಿಗೆ ಶಾಲಾ ಮಕ್ಕಳು ಬಲಿ

ಏಜೆನ್ಸೀಸ್
Published 21 ಸೆಪ್ಟೆಂಬರ್ 2022, 5:18 IST
Last Updated 21 ಸೆಪ್ಟೆಂಬರ್ 2022, 5:18 IST
   

ಮ್ಯಾನ್ಮಾರ್‌ನ ಹಳ್ಳಿಯೊಂದರ ಶಾಲೆಯ ಮೇಲೆ ನಡೆದ ವಾಯುದಾಳಿ ಮತ್ತು ಗುಂಡಿನ ದಾಳಿಗೆ ಸಿಲುಕಿ ಕನಿಷ್ಠ 11 ಮಂದಿ ಶಾಲಾಮಕ್ಕಳು ಮೃತಪಟ್ಟಿದ್ದಾರೆ ಎಂದು ವಿಶ್ವಸಂಸ್ಥೆ ಹೇಳಿದೆ.

ಮ್ಯಾನ್ಮಾರ್‌ನಲ್ಲಿ ಬಂಡುಕೋರರು ಅಡಗಿದ್ದಾರೆ ಎನ್ನುವ ಮಾಹಿತಿಯನ್ನು ಆಧರಿಸಿ ದಾಳಿ ನಡೆಸಲಾಗಿತ್ತು ಎಂದು ವಿಶ್ವಸಂಸ್ಥೆಯ ಮಕ್ಕಳ ಏಜೆನ್ಸಿ ಯುನಿಸೆಫ್ ಹೇಳಿತ್ತು.

ವಿಶ್ವಸಂಸ್ಥೆಯ ಮುಖ್ಯಸ್ಥ ಅಂಟೊನಿಯೊ ಗುಟೆರಸ್ ಅವರು ಈ ಘಟನೆಯನ್ನು ಖಂಡಿಸಿದ್ದಾರೆ. ವರದಿಯ ಪ್ರಕಾರ ದಾಳಿಯಲ್ಲಿ ಒಟ್ಟು 13 ಮಂದಿ ಮೃತಪಟ್ಟಿದ್ದು, ಅವರಲ್ಲಿ 11 ಮಂದಿ ವಿದ್ಯಾರ್ಥಿಗಳಾಗಿದ್ದಾರೆ.

ADVERTISEMENT

ಕಳೆದ ವರ್ಷದ ಫೆಬ್ರುವರಿಯಿಂದ ಮ್ಯಾನ್ಮಾರ್‌ನಲ್ಲಿ ಮಿಲಿಟರಿ ಆಡಳಿತ ಹೇರಲಾಗಿದೆ. ಅದಾದ ಬಳಿಕ ವಿವಿಧ ಸಂದರ್ಭದಲ್ಲಿ ಉಂಟಾದ ಸಂಘರ್ಷದಲ್ಲಿ 2,300 ನಾಗರಿಕರು ಸಾವನ್ನಪ್ಪಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.