ADVERTISEMENT

ಮ್ಯಾನ್ಮಾರ್‌ ಮಿಲಿಟರಿ ವೈಮಾನಿಕ ದಾಳಿ; 100 ಮಂದಿ ಸಾವು

ಏಜೆನ್ಸೀಸ್
Published 12 ಏಪ್ರಿಲ್ 2023, 2:47 IST
Last Updated 12 ಏಪ್ರಿಲ್ 2023, 2:47 IST
   

ಬ್ಯಾಂಕಾಕ್: ಮ್ಯಾನ್ಮಾರ್‌ನಲ್ಲಿ ಮಿಲಿಟರಿ ವಿರುದ್ಧದ ಪ್ರತಿಭಟನೆ ಹತ್ತಿಕ್ಕಲು ಸೇನೆ ನಡೆಸಿದ ವೈಮಾನಿಕ ದಾಳಿಯಲ್ಲಿ ಮಕ್ಕಳು ಸೇರಿದಂತೆ 100 ಮಂದಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.

ಈ ಭೀಕರ ದಾಳಿಯನ್ನು ವಿಶ್ವಸಂಸ್ಥೆ, ಅಮೆರಿಕ ಸೇರಿದಂತೆ ಪಾಶ್ಚಿಮಾತ್ಯ ರಾಷ್ಟ್ರಗಳು ಬಲವಾಗಿ ಖಂಡಿಸಿವೆ.

ಮ್ಯಾನ್ಮಾರ್‌ನಲ್ಲಿ ಆಂಗ್ ಸಾನ್ ಸೂಕಿ ನೇತೃತ್ವದ ಚುನಾಯಿತ ಸರ್ಕಾರ ಪದ್ಯಚುತಗೊಳಿಸಿ 2021ರ ಫೆಬ್ರುವರಿಯಲ್ಲಿ ಸೇನೆ ಅಧಿಕಾರಿ ಹಿಡಿದಿತ್ತು. ಅಲ್ಲದೆ ಜನರ ಪ್ರತಿಭಟನೆ ಹತ್ತಿಕ್ಕಲು ನಿರಂತರವಾಗಿ ದಾಳಿ ನಡೆಸಲಾಗುತ್ತಿದೆ.

ADVERTISEMENT

ಈವರೆಗೆ ಮಿಲಿಟರಿ ದಾಳಿಗೆ 3,000ಕ್ಕೂ ಹೆಚ್ಚು ನಾಗರಿಕರು ಸಾವಿಗೀಡಾಗಿದ್ದಾರೆ ಎಂದು ಅಂದಾಜಿಸಲಾಗಿದೆ.

ಪ್ರತ್ಯಕ್ಷದರ್ಶಿಗಳ ಪ್ರಕಾರ ದೇಶದ ಎರಡನೇ ದೊಡ್ಡ ನಗರವಾದ ಮ್ಯಾಂಡಲೆಯ ಉತ್ತರಕ್ಕೆ ಸುಮಾರು 110 ಕಿ.ಮೀ. ದೂರದಲ್ಲಿನ ಸಾಗಯಿಂಗ್ ಪ್ರಾಂತ್ಯದ ಪಝಿಗಿ ಗ್ರಾಮದಲ್ಲಿ ಸೇನೆ ವಿರುದ್ಧ ಚಳವಳಿಯ ಕಾರ್ಯಕ್ರಮಕ್ಕಾಗಿ ಸೇರಿದ್ದ ಜನರ ಗುಂಪಿನ ಮೇಲೆ ವೈಮಾನಿಕ ಬಾಂಬ್ ದಾಳಿ ನಡೆಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.