ADVERTISEMENT

ಭಾರತದ ಜತೆ ಉತ್ತಮ ಬಾಂಧವ್ಯ

ಟ್ರಂಪ್ ಹೇಳಿಕೆ ಅಲ್ಲಗಳೆದ ಜೈಶಂಕರ್

​ಪ್ರಜಾವಾಣಿ ವಾರ್ತೆ
Published 26 ಜುಲೈ 2019, 20:18 IST
Last Updated 26 ಜುಲೈ 2019, 20:18 IST
ಕೆಲಿಯಾನ್‌ ಕಾನ್ವೆ
ಕೆಲಿಯಾನ್‌ ಕಾನ್ವೆ   

ವಾಷಿಂಗ್ಟನ್: ಅಮೆರಿಕವು ಭಾರತದೊಂದಿಗೆ ಉತ್ತಮ ಸಂಬಂಧ ಹೊಂದಿದೆ ಎಂದು ಅಮೆರಿಕದ ಶ್ವೇತ ಭವನದ ಕೌನ್ಸಿಲರ್ ಕೆಲಿಯಾನ್‌ ಕಾನ್ವೆ ತಿಳಿಸಿದ್ದಾರೆ.

‘ಅಭಿವೃದ್ಧಿ ವಿಚಾರಕ್ಕೆ ಸಂಬಂಧಿಸಿದಂತೆ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಭಾರತ ಸರ್ಕಾರದ ಜೊತೆಗೆ ಅಮೆರಿಕವು ಉತ್ತಮ ಬಾಂಧವ್ಯ ಹೊಂದಿದೆ’ ಎಂದು ಕಾನ್ವೆ, ಶ್ವೇತಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ. ಕಾಶ್ಮೀರದ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸುವಂತೆ ಅಧ್ಯಕ್ಷ ಟ್ರಂಪ್ ಅವರನ್ನು ಕೋರಿಲ್ಲ ಎಂದು ಭಾರತ ಸರ್ಕಾರ ಸ್ಪಷ್ಟಪಡಿಸಿರುವ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಭೇಟಿ ಸಂದರ್ಭದಲ್ಲಿ ‘ಕಾಶ್ಮೀರ ವಿಷಯದಲ್ಲಿ ಅಮೆರಿಕ ಮಧ್ಯಸ್ಥಿಕೆ ಬಗ್ಗೆ ಮೋದಿ ತಮ್ಮೊಂದಿಗೆ ಚರ್ಚಿಸಿದ್ದಾರೆ’ ಎಂದು ಟ್ರಂಪ್ ಹೇಳಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.