ADVERTISEMENT

ಅಮೆರಿಕ ವಿಶ್ವದ ನಂಬರ್ ಒನ್ ಇಂಧನ ಉತ್ಪಾದಕ ರಾಷ್ಟ್ರವಾಗಿದೆ: ಡೊನಾಲ್ಡ್ ಟ್ರಂಪ್

ಏಜೆನ್ಸೀಸ್
Published 12 ಫೆಬ್ರುವರಿ 2026, 2:54 IST
Last Updated 12 ಫೆಬ್ರುವರಿ 2026, 2:54 IST
<div class="paragraphs"><p>ಡೊನಾಲ್ಡ್ ಟ್ರಂಪ್</p></div>

ಡೊನಾಲ್ಡ್ ಟ್ರಂಪ್

   

ವಾಷಿಂಗ್ಟನ್: ಅಮೆರಿಕವು ವಿಶ್ವದ ನಂಬರ್ ಒನ್ ಇಂಧನ ಉತ್ಪಾದಕ ರಾಷ್ಟ್ರವಾಗಿದ್ದು, ಬೃಹತ್ ಇಂಧನ ರಫ್ತುದಾರ ರಾಷ್ಟ್ರವಾಗುವತ್ತ ದಾಪುಗಾಲಿಟ್ಟಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ‘ಜಪಾನ್, ದಕ್ಷಿಣ ಕೊರಿಯಾ, ಭಾರತ ಸೇರಿದಂತೆ ಇತರೆ ದೇಶಗಳೊಂದಿಗಿನ ಇತ್ತೀಚಿನ ವ್ಯಾಪಾರ ಒಪ್ಪಂದಗಳು ಅಮೆರಿಕದ ಕಲ್ಲಿದ್ದಲು ರಫ್ತಿನಲ್ಲಿ ಗಣನೀಯ ಹೆಚ್ಚಳಕ್ಕೆ ಕಾರಣವಾಗಿವೆ’ ಎಂದು ಹೇಳಿದ್ದಾರೆ.

ADVERTISEMENT

ಅಮೆರಿಕದ ಕಲ್ಲಿದ್ದಲು ಗುಣಮಟ್ಟ ಜಗತ್ತಿನಲ್ಲೇ ಅತ್ಯುತ್ತಮವಾದದ್ದು ಎಂಬುದಾಗಿ ಹಲವು ದೇಶಗಳು ಭಾವಿಸಿವೆ ಎಂದು ಅವರು ತಿಳಿಸಿದ್ದಾರೆ.

‘ಭಾರತ ತನ್ನ ರಾಷ್ಟ್ರೀಯ ಹಿತಾಸಕ್ತಿಗೆ ಅನುಗುಣವಾಗಿ ಸಾಕಷ್ಟು ಲಭ್ಯತೆ, ನ್ಯಾಯಯುತ ಬೆಲೆ ಮತ್ತು ಪೂರೈಕೆಯ ವಿಶ್ವಾಸಾರ್ಹತೆ ಆಧರಿಸಿ ಇಂಧನ ನೀತಿಗೆ ಸಂಬಂಧಿಸಿದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ’ ಎಂದು ಈಚೆಗೆ ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಹೇಳಿದ್ದರು.

‘ತೈಲ ಕಂಪನಿಗಳು ಆಂತರಿಕ ಹೊಣೆಗಾರಿಕೆ ಮತ್ತು ವಿಶ್ವಾಸಾರ್ಹ ಜವಾಬ್ದಾರಿಗಳಿಗೆ ಬದ್ಧವಾಗಿರುತ್ತಲೇ, ಲಭ್ಯತೆ, ವೆಚ್ಚ ಮತ್ತು ಲಾಜಿಸ್ಟಿಕ್ಸ್ ಸೇರಿದಂತೆ ಮಾರುಕಟ್ಟೆ ಪರಿಸ್ಥಿತಿಗಳ ಆಧಾರದ ಮೇಲೆ ಖರೀದಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತವೆ’ ಎಂದೂ ಮಿಶ್ರಿ ಸ್ಪಷ್ಟಪಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.