ADVERTISEMENT

ಶ್ರೀಲಂಕಾ ಬಿಕ್ಕಟ್ಟು: ಜುಲೈ 13ರಂದು ಅಧ್ಯಕ್ಷ ಗೊಟಬಯ ರಾಜಪಕ್ಸ ರಾಜೀನಾಮೆ

ಐಎಎನ್ಎಸ್
Published 10 ಜುಲೈ 2022, 2:00 IST
Last Updated 10 ಜುಲೈ 2022, 2:00 IST
ಗೊಟಬಯ ರಾಜಪಕ್ಸ
ಗೊಟಬಯ ರಾಜಪಕ್ಸ   

ಕೊಲಂಬೊ: ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಶ್ರೀಲಂಕಾದಲ್ಲಿ ಜನರ ಆಕ್ರೋಶಕ್ಕೆ ಕೊನೆಗೂ ಮಣಿದಿರುವ ಅಧ್ಯಕ್ಷ ಗೊಟಬಯ ರಾಜಪಕ್ಸ, ಜುಲೈ 13ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಸ್ಪೀಕರ್ ಮಹಿಂದಾ ಯಪಾ ಅಬೆವರ್ಧನ, 'ಇದೇ 13ರಂದು ಗೊಟಬಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ' ಎಂದು ಹೇಳಿದ್ದಾರೆ.

ಗೊಟಬಯ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನಕಾರರು ಶನಿವಾರ ಅಧ್ಯಕ್ಷರ ಗೃಹಕಚೇರಿಗೆ ನುಗ್ಗಿದ್ದರು. ಇದಕ್ಕೂ ಮುನ್ನವೇ ಅಧ್ಯಕ್ಷರು ಪಲಾಯನ ಮಾಡಿದ್ದರು.

ಅಧ್ಯಕ್ಷರ ರಾಜೀನಾಮೆ ಘೋಷಣೆಯಾಗುತ್ತಿದ್ದಂತೆಯೇ ಜನರು ಪಟಾಕಿ ಸಿಡಿಸಿ ಸಂಭ್ರಮವನ್ನು ಆಚರಿಸಿಕೊಂಡರು.

ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಸಹ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ನಡುವೆ ಉದ್ರಿಕ್ತ ಜನರ ಗುಂಪುಪ್ರಧಾನಿ ನಿವಾಸದ ಮೇಲೆ ದಾಳಿ ನಡೆಸಿ, ಬೆಂಕಿ ಹಚ್ಚಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.