ಮ್ಯಾನ್ಮಾರ್‌ನಲ್ಲಿ ಪ್ರಬಲ ಭೂಕಂಪ
(ಚಿತ್ರ ಕೃಪೆ– X/@UNICEF)
ಮ್ಯಾನ್ಮಾರ್‌ನಲ್ಲಿ ಇಂದು (ಶನಿವಾರ) ಮಧ್ಯಾಹ್ನ 2.50ಕ್ಕೆ ಮತ್ತೆ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 4.7ರಷ್ಟು ತೀವ್ರತೆ ದಾಖಲಾಗಿದೆ ಎಂದು ಭಾರತದ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದೆ.
ಶುಕ್ರವಾರ ಮ್ಯಾನ್ಮಾರ್ ಮತ್ತು ನೆರೆಯ ಥೈಲ್ಯಾಂಡ್‌ನಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ಕಟ್ಟಡಗಳು, ಸೇತುವೆಗಳು ನೆಲಸಮವಾಗಿವೆ. ಮ್ಯಾನ್ಮಾರ್‌ನಲ್ಲಿ ಸಾವಿರಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.
ಭೂಕಂಪ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಗಳಿಗಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣೆ ಪಡೆಯ (ಎನ್‌ಡಿಆರ್‌ಎಫ್) 80 ಸಿಬ್ಬಂದಿಯನ್ನು ಭಾರತ ಕಳುಹಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.