ಕಠ್ಮಂಡು: ನೇಪಾಳದ ಮುಗು ಜಿಲ್ಲೆಯಲ್ಲಿ ಸೋಮವಾರ ಮತ್ತೆ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.3ರಷ್ಟು ತೀವ್ರತೆ ದಾಖಲಾಗಿದೆ.
ಜಿಲ್ಲೆಯ ಕೊಟ್ದಂದಾ ಪ್ರದೇಶದಲ್ಲಿ ಬೆಳಿಗ್ಗೆ 8.39ರ ಸುಮಾರಿಗೆ ಭೂಮಿ ಕಂಪಿಸಿದೆ ಎಂದು ರಾಷ್ಟ್ರೀಯ ಭೂಕಂಪನ ನಿಗಾ ಮತ್ತು ಸಂಶೋಧನಾ ಕೇಂದ್ರ ತಿಳಿಸಿದೆ.
ಯಾವುದೇ ಹಾನಿಯಾದ ಬಗ್ಗೆ ತಕ್ಷಣಕ್ಕೆ ವರದಿಯಾಗಿಲ್ಲ. ಭಾನುವಾರ ಮಧ್ಯಾಹ್ನವೂ ಇಲ್ಲಿ ಭೂಕಂಪನ ಸಂಭವಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.