ಕಂದಹಾರ್(ಅಫ್ಗಾನಿಸ್ತಾನ): ಕಂದಹಾರ್ ಪ್ರಾಂತ್ಯದ ಬೋಲ್ಡಾಕ್ ಜಿಲ್ಲೆಯಲ್ಲಿ ಗುರುವಾರ ಪಾಕಿಸ್ತಾನ ಪಡೆಗಳು ನಡೆಸಿದ ರಾಕೆಟ್ ದಾಳಿಯಲ್ಲಿ ಕನಿಷ್ಠ 9 ನಾಗರಿಕರು ಮೃತಪಟ್ಟಿದ್ದಾರೆಂದು ಅಫ್ಗಾನಿಸ್ತಾನ ಮಾಧ್ಯಮವೊಂದು ವರದಿ ಮಾಡಿದೆ.
ಬೋಲ್ಡಾಕ್ ಜಿಲ್ಲೆಯಲ್ಲಿ ವಸತಿ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನದ ಪಡೆಗಳು ರಾಕೆಟ್ ದಾಳಿ ನಡೆಸಿವೆ. ಘಟನೆಯಲ್ಲಿ ಕನಿಷ್ಠ 9 ನಾಗರಿಕರು ಮೃತಪಟ್ಟಿದ್ದು, 50 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.