ಕಾಬೂಲ್: ಅಫ್ಗಾನಿಸ್ತಾನದ ರಾಜಧಾನಿ ಕಾಬೂಲ್ ನ ಹಮೀದ್ ಕರ್ಜೈ ವಿಮಾನ ನಿಲ್ದಾಣದಲ್ಲಿ ಕಳೆದ ರಾತ್ರಿ ಸಂಭವಿಸಿದ ಆತ್ಮಹತ್ಯಾ ದಾಳಿಯಲ್ಲಿ ಮೃತಪಟ್ಟವರ ಪೈಕಿ 28 ಮಂದಿ ನಮ್ಮವರೂ ಸೇರಿದ್ದಾರೆ ಎಂದು ತಾಲಿಬಾನ್ ಅಧಿಕಾರಿಯೊಬ್ಬರು ರಾಯಿಟರ್ಸ್‌ಗೆ ತಿಳಿಸಿದ್ದಾರೆ.
ನಾವು ಅಮೆರಿಕಗಿಂತ ಹೆಚ್ಚು ಜನರನ್ನು ಕಳೆದುಕೊಂಡಿದ್ದೇವೆ ಎಂದಿದ್ದಾರೆ. ವಿದೇಶಿ ಪಡೆಗಳು ದೇಶ ಬಿಟ್ಟು ತೆರಳಲು ವಿಧಿಸಿರುವ ಆಗಸ್ಟ್ 31ರ ಗಡುವು ವಿಸ್ತರಿಸಲು ಯಾವುದೇ ಕಾರಣವಿಲ್ಲ ಎಂದು ಅಧಿಕಾರಿ ಹೇಳಿದ್ದಾರೆ.
ಸ್ಫೋಟದಲ್ಲಿ 13 ಮಂದಿ ಅಮೆರಿಕದ ಯೋಧರು, ತಾಲಿಬಾನಿಗಳು ಮತ್ತು ಆಫ್ಗನ್ ಪ್ರಜೆಗಳು ಸೇರಿ 60ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಸ್ಫೋಟದ ಬಳಿಕ ವಿದೇಶಿ ಸಂಸ್ಥೆಗಳು ಸ್ಥಳಾಂತರ ಪ್ರಕ್ರಿಯೆಯನ್ನು ಚುರುಕುಗೊಳಿಸಿವೆ ಎಂದು ತಿಳಿದುಬಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.