ADVERTISEMENT

ಅಫ್ಘಾನಿಸ್ತಾನ: ಪೋಲಿಯೊ ತಂಡದ ಮೇಲೆ ದಾಳಿ, ನಾಲ್ವರು ಸಾವು

ಏಜೆನ್ಸೀಸ್
Published 15 ಜೂನ್ 2021, 15:04 IST
Last Updated 15 ಜೂನ್ 2021, 15:04 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಕಾಬೂಲ್: ಪೂರ್ವ ಅಫ್ಘಾನಿಸ್ತಾನದ ಜಲಾಲಬಾದ್‌ನಲ್ಲಿ ಪೋಲಿಯೊ ತಂಡಗಳ ಸದಸ್ಯರನ್ನು ಗುರಿಯಾಗಿಸಿಕೊಂಡು ಬಂದೂಕುಧಾರಿಗಳು ನಡೆಸಿದ ದಾಳಿಯಲ್ಲಿ ನಾಲ್ವರು ಸಿಬ್ಬಂದಿ ಹತ್ಯೆಗೀಡಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೋಲಿಯೊ ಲಸಿಕಾ ತಂಡಗಳಲ್ಲಿದ್ದ ಇತರ ಮೂವರು ಸದಸ್ಯರು ಗಾಯಗೊಂಡಿದ್ದಾರೆ ಎಂದು ಪೋಲಿಯೊ ಅಭಿಯಾನದ ಸಂಘಟಕ ಡಾ.ಜಾನ್ ಮೊಹಮ್ಮದ್ ಹೇಳಿದ್ದಾರೆ.

ಇದುವರೆಗೆ ಯಾವ ಉಗ್ರ ಸಂಘಟನೆಯೂ ದಾಳಿಯ ಹೊಣೆ ಹೊತ್ತುಕೊಂಡಿಲ್ಲ.

ADVERTISEMENT

ಅಫ್ಘಾನಿಸ್ತಾನದಲ್ಲಿ ಪೋಲಿಯೊ ಲಸಿಕಾ ಕೇಂದ್ರಗಳು ಮತ್ತು ಆರೋಗ್ಯ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಈಚೆಗೆ ನಿರಂತರ ದಾಳಿಗಳು ನಡೆಯುತ್ತಿವೆ. ಪೋಲಿಯೊ ಲಸಿಕೆಯ ಮೂಲಕ ಮಕ್ಕಳ ದೇಹದೊಳಗೆ ಕ್ರಿಮಿನಾಶಕ ಸೇರಿಸಲಾಗುತ್ತದೆ ಎಂದೂ, ಪೋಲಿಯೊ ಮೂಲಕ ಪಾಶ್ಚಿಮಾತ್ಯ ರಾಷ್ಟ್ರಗಳು ಗುಪ್ತಚರ ಮಾಹಿತಿ ಸಂಗ್ರಹಿಸುವ ಪಿತೂರಿ ಕೈಗೊಂಡಿವೆ ಎಂದೂ ಉಗ್ರ ಸಂಘಟನೆಗಳು ಭಾವಿಸಿವೆ.

ಮಾರ್ಚ್ ತಿಂಗಳಲ್ಲಿ ಪೋಲಿಯೊ ಲಸಿಕಾ ತಂಡದ ಮೇಲೆ ಇಸ್ಲಾಮಿಕ್ ಸ್ಟೇಟ್ಸ್ ಉಗ್ರರ ತಂಡ ನಡೆಸಿದ ದಾಳಿಯಲ್ಲಿ ಮೂವರು ಮಹಿಳಾ ಸಿಬ್ಬಂದಿ ಮೃತಪಟ್ಟಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.