ADVERTISEMENT

ಆಸ್ಟ್ರೇಲಿಯಾ: ವಿ.ವಿಗಳಲ್ಲಿ ವಿದೇಶಿ ಹಸ್ತಕ್ಷೇಪಕ್ಕೆ ಕಡಿವಾಣ

ಏಜೆನ್ಸೀಸ್
Published 28 ಆಗಸ್ಟ್ 2019, 15:18 IST
Last Updated 28 ಆಗಸ್ಟ್ 2019, 15:18 IST
   

ಕ್ಯಾನ್‌ಬೆರಾ:ವಿಶ್ವವಿದ್ಯಾಲಯಗಳ ಆಡಳಿತದಲ್ಲಿ ವಿದೇಶಿ ಸರ್ಕಾರಗಳ ಹಸ್ತಕ್ಷೇಪಕ್ಕೆ ಕಡಿವಾಣ ಹಾಕಲು ವಿಶೇಷ ಕಾರ್ಯಪಡೆಯನ್ನು ರಚಿಸಲಾಗಿದೆ ಎಂದು ಶಿಕ್ಷಣ ಸಚಿವ ಡಾನ್‌ ತೆಹನ್‌ ತಿಳಿಸಿದ್ದಾರೆ.

ಆಸ್ಟ್ರೇಲಿಯಾ ವಿಶ್ವವಿದ್ಯಾಲಯದಲ್ಲಿ ಚೀನಾದ ಪ್ರಭಾವ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ.

ವಿಶ್ವವಿದ್ಯಾನಿಲಯಗಳಲ್ಲಿ ಚೀನಾದ ಸಿದ್ಧಾಂತಗಳನ್ನು ಹೇರಲು ಪ್ರಯತ್ನಿಸುತ್ತಿರುವ ಬೀಜಿಂಗ್‌–ಅನುದಾನಿತ ಸಂಸ್ಥೆಗಳ ಪ್ರಭಾವದ ಬಗ್ಗೆ ಆಸ್ಟ್ರೇಲಿಯಾ ಕಳವಳ ವ್ಯಕ್ತಪಡಿಸಿದೆ.

ADVERTISEMENT

ಕಳೆದ ವರ್ಷ ರಾಜಕೀಯದಲ್ಲಿ ವಿದೇಶಿ ಹಸ್ತಕ್ಷೇಪವನ್ನು ನಿಷೇಧಿಸುವ ಮೂಲಕ ಆಸ್ಟ್ರೇಲಿಯಾ ಚೀನಾದ ಕೋಪಕ್ಕೆ ಗುರಿಯಾಗಿತ್ತು. ರಾಜಕೀಯ ಕ್ಷೇತ್ರಕ್ಕೆ ವಿದೇಶಿ ದೇಣಿಗೆಯನ್ನು ಇಲ್ಲಿ ನಿಷೇಧಿಸಲಾಗಿದೆ.

ಇಲ್ಲಿಯ ವಿಶ್ವವಿದ್ಯಾಲಯಗಳಲ್ಲಿ ಚೀನಾದ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಇತ್ತೀಚೆಗೆ ಚೀನಾ ಪರ ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲಿ ಹಾಂಗ್‌ಕಾಂಗ್‌ ಪ್ರಜಾಪ್ರಭುತ್ವ ಪರ ವಕೀಲರೊಂದಿಗೆ ಘರ್ಷಣೆ ನಡೆಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.