ADVERTISEMENT

ಅಸಾಂಜ್‌ಗೆ ಮರಣದಂಡನೆ ವಿಧಿಸಬಾರದು: ಆಸ್ಟ್ರೇಲಿಯಾ

ಏಜೆನ್ಸೀಸ್
Published 12 ಏಪ್ರಿಲ್ 2019, 19:45 IST
Last Updated 12 ಏಪ್ರಿಲ್ 2019, 19:45 IST
ಜೂಲಿಯನ್‌ ಅಸಾಂಜ್‌
ಜೂಲಿಯನ್‌ ಅಸಾಂಜ್‌   

ಲಂಡನ್‌: ವಿಕಿಲೀಕ್ಸ್‌ ಸಹ ಸಂಸ್ಥಾಪಕ ಜೂಲಿಯನ್‌ ಅಸಾಂಜ್‌ ಅವರಿಗೆ ಮರಣದಂಡನೆ ವಿಧಿಸಬಾರದು ಎಂದು ಆಸ್ಟ್ರೇಲಿಯಾದ ವಿದೇಶಾಂಗ ಸಚಿವೆ ಮರಿಸೆ ಪೈನೆ ಹೇಳಿದ್ದಾರೆ.

‘ಅಸಾಂಜ್‌ ಅವರಿಗೆ ಮರಣದಂಡನೆ ವಿಧಿಸುವುದಿಲ್ಲ ಎಂದು ಭರವಸೆ ನೀಡುವಂತೆ ಅಮೆರಿಕಕ್ಕೆ ಕೋರಲಾಗಿದೆ’ ಎಂದೂ ಅವರು ಹೇಳಿದ್ದಾರೆ.

ಆಸ್ಟ್ರೇಲಿಯಾ ಪ್ರಜೆ ಜೂಲಿಯನ್‌ ಅವರನ್ನು ಅಮೆರಿಕಕ್ಕೆ ಹಸ್ತಾಂತರಿಸಿದರೆ ಅಲ್ಲಿ ಅವರಿಗೆ ಮರಣದಂಡನೆ ವಿಧಿಸುವ ಸಾಧ್ಯತೆ ಇದೆ ಎಂದು ಅವರ ಬೆಂಬಲಿಗರು ಆತಂಕ ವ್ಯಕ್ತಪಡಿಸಿದ್ದಾರೆ.

ADVERTISEMENT

ಆಸ್ಟ್ರೇಲಿಯಾದ ವಿದೇಶಾಂಗ ಇಲಾಖೆಯ ಅಧಿಕಾರಿಗಳು ಲಂಡನ್‌ನ ಜೈಲಿನಲ್ಲಿರುವ ಜೂಲಿಯನ್‌ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಕಳೆದ ಏಳು ವರ್ಷಗಳಿಂದ ಈಕ್ವೆಡಾರ್‌ ರಾಯಭಾರಿ ಕಚೇರಿಯಲ್ಲಿ ಆಶ್ರಯ ಪಡೆದಿದ್ದ ಜೂಲಿಯನ್‌ ಅವರನ್ನು ಪೊಲೀಸರು ಗುರುವಾರ ಬಂಧಿಸಿದ್ದರು.

ಅಮೆರಿಕಕ್ಕೆ ಸಂಬಂಧಿಸಿದ ಅನೇಕ ರಹಸ್ಯ ವಿಷಯಗಳನ್ನು ಸೋರಿಕೆ ಮಾಡಿರುವ ಆರೋಪ ಸದ್ಯಕ್ಕೆ ಇವರ ಮೇಲಿದೆ. ಈ ಪ್ರಕರಣದಲ್ಲಿ ಆರೋಪ ಸಾಬೀತಾದರೂ ಮರಣದಂಡನೆ ವಿಧಿಸುವ ಸಾಧ್ಯತೆ ಇಲ್ಲ. ಆದರೆ ಅಸಾಂಜ್‌ ವಿರುದ್ಧ ಇನ್ನೂ ಹಲವು ಗಂಭೀರ ಆರೋಪಗಳನ್ನು ಹೊರಿಸುವ ಸಾಧ್ಯತೆ ಇದೆ ಎಂದು ಅವರ ಬೆಂಬಲಿಗರು ಆರೋಪಿಸಿದ್ದಾರೆ.

ಅಮೆರಿಕಕ್ಕೆ ಹಸ್ತಾಂತರ ಮಾಡುವುದರ ವಿರುದ್ಧ ಕಾನೂನು ಹೋರಾಟ ಮಾಡಲು ಅಸಾಂಜ್‌ ಚಿಂತನೆ ನಡೆಸುತ್ತಿದ್ದಾರೆ. ಈ ಪ್ರಕರಣದಲ್ಲಿ ಮಧ್ಯಸ್ಥಿಕೆ ವಹಿಸುವುದಿಲ್ಲ ಎಂಬ ಸೂಚನೆಯನ್ನುಆಸ್ಟ್ರೇಲಿಯಾದ ನಾಯಕರು ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.