ADVERTISEMENT

‘ಅಸಾಂಜ್‌ ಕರೆತನ್ನಿ’: ಪಮೇಲಾ ಮನವಿ ತಿರಸ್ಕರಿಸಿದ ಆಸ್ಟ್ರೇಲಿಯಾ ಪ್ರಧಾನಿ

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2019, 20:29 IST
Last Updated 27 ನವೆಂಬರ್ 2019, 20:29 IST
ಜೂಲಿಯನ್‌ ಅಸಾಂಜ್‌
ಜೂಲಿಯನ್‌ ಅಸಾಂಜ್‌   

ಸಿಡ್ನಿ(ಎಎಫ್‌ಪಿ): ವಿಕಿಲೀಕ್ಸ್‌ ಸಂಸ್ಥಾಪಕ ಜೂಲಿಯನ್‌ ಅಸಾಂಜ್‌ ಅವರನ್ನು ಆಸ್ಟ್ರೇಲಿಯಾಕ್ಕೆ ಕರೆತರಬೇಕೆಂದು ಹಾಲಿವುಡ್‌ ನಟಿ ಪಮೇಲಾ ಅಂಡರ್‌ಸನ್‌ ಮಾಡಿರುವ ಮನವಿಯನ್ನು ಅಲ್ಲಿನ ಪ್ರಧಾನಿ ಸ್ಕಾಟ್‌ ಮಾರಿಸನ್ ತಿರಸ್ಕರಿಸಿದ್ದಾರೆ.

ಈ ವಿಷಯದಲ್ಲಿ ಆಸ್ಟ್ರೇಲಿಯಾ ಮಧ್ಯಪ್ರವೇಶಿಸುವುದಿಲ್ಲ ಎಂದೂ ಸ್ಪಷ್ಟಪಡಿಸಿದ್ದಾರೆ.

‘ಲಂಡನ್‌ನಲ್ಲಿ ಸೆರೆವಾಸ ಅನುಭವಿಸುತ್ತಿರುವ ಅಸಾಂಜ್‌ ಅವರನ್ನು ಅಮೆರಿಕಕ್ಕೆ ಹಸ್ತಾಂತರಿಸುವುದನ್ನು ತಡೆಯಲು ಆಸ್ಟ್ರೇಲಿಯಾಕ್ಕೆ ಕರೆತರಬೇಕು’ ಎಂದು ಪಮೇಲಾ ಅವರು ಮಾರಿಸನ್‌ ಅವರಿಗೆ ಬರೆದ ಪತ್ರದಲ್ಲಿ ಒತ್ತಾಯಿಸಿದ್ದರು.

ADVERTISEMENT

‘ಅಸಾಂಜ್‌ ಅವರು ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದಾರೆ’ ಎಂದೂ ಪತ್ರದಲ್ಲಿ ಉಲ್ಲೇಖಿಸಿದ್ದರು.

‘ಅಸಾಂಜ್‌ ವಿಚಾರದಲ್ಲಿ ಆಸ್ಟ್ರೇಲಿಯಾಕ್ಕೆ ಯಾವುದೇ ನಿಲುವುಗಳಿಲ್ಲ ಮತ್ತು ಕಾನೂನು ಪ್ರಕ್ರಿಯೆಯಲ್ಲಿ ಮಧ್ಯಪ್ರವೇಶಿಸುವುದಿಲ್ಲ’ ಎಂದು ಮಾರಿಸನ್‌ ಹೇಳಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

ಅಮೆರಿಕಕ್ಕೆ ಸಂಬಂಧಿಸಿದ ಅನೇಕ ರಹಸ್ಯ ಮಾಹಿತಿಗಳನ್ನು ಸೋರಿಕೆ ಮಾಡಿರುವ ಆರೋಪವು ಅಸಾಂಜ್‌ ಮೇಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.