ADVERTISEMENT

ಕೋವಿಡ್‌: ಆಸ್ಟ್ರೇಲಿಯಾದಲ್ಲಿ ತಗ್ಗಿದ ಸಾವಿನ ಪ್ರಮಾಣ

ರಾಯಿಟರ್ಸ್
Published 9 ಅಕ್ಟೋಬರ್ 2020, 4:47 IST
Last Updated 9 ಅಕ್ಟೋಬರ್ 2020, 4:47 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಸಿಡ್ನಿ: ಆಸ್ಟ್ರೇಲಿಯಾದಲ್ಲಿ ಕಳೆದ 24 ಗಂಟೆಗಳಲ್ಲಿ 16 ಹೊಸ ಕೋವಿಡ್‌ ಪ್ರಕರಣಗಳು ವರದಿಯಾಗಿವೆ. ಜುಲೈ 11ರಿಂದ ಇದೇ ಮೊದಲು ಬಾರಿಗೆ 48 ಗಂಟೆಗಳ ಅವಧಿಯಲ್ಲಿ ಯಾವುದೇ ಸಾವು–ನೋವುಗಳು ದಾಖಲಾಗಿಲ್ಲ.

ಸದ್ಯ ಆಸ್ಟ್ರೇಲಿಯಾದಲ್ಲಿ ಕೋವಿಡ್‌ನ ಎರಡನೇ ಹಂತದ ಪ್ರಸರಣ ಆರಂಭವಾಗಿದೆ. ಆದರೆ, ಪತ್ತೆಯಾಗಿರುತ್ತಿರುವ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ.

ದೇಶದ ಎರಡನೇ ಅತಿಹೆಚ್ಚು ಜನಸಂಖ್ಯೆ ಹೊಂದಿರುವ ವಿಕ್ಟೋರಿಯಾ ರಾಜ್ಯದಲ್ಲಿ 200ಕ್ಕಿಂತ ಕಡಿಮೆ ಸಕ್ರಿಯ ಪ್ರಕರಣಗಳು ದಾಖಲಾಗಿವೆ.

ADVERTISEMENT

ಆಸ್ಟ್ರೇಲಿಯಾದಲ್ಲಿ ಇದುವರೆಗೆ 27,000ಕ್ಕೂ ಹೆಚ್ಚು ಸೋಂಕು ಪ್ರಕರಣಗಳು ದಾಖಲಾಗಿದ್ದು, 900 ಮಂದಿ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.