
ಪಾಕಿಸ್ತಾನದಲ್ಲಿರುವ ಅಮೆರಿಕ ರಾಯಭಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು
ಕರಾಚಿ: ಅಮೆರಿಕ ಹಾಗೂ ಇಸ್ರೇಲ್ ನಡೆಸಿದ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯಾತೊಲ್ಲಾ ಅಲಿ ಖಮೇನಿ ಹತರಾಗಿದ್ದಾರೆ.
ಖಮೇನಿ ಹತ್ಯೆಯನ್ನು ಖಂಡಿಸಿ ಪಾಕಿಸ್ತಾನದಲ್ಲಿ ಆಕ್ರೋಶ ಭುಗಿಲೆದ್ದಿದೆ. ಪ್ರತಿಭಟನಕಾರರು ಪಾಕಿಸ್ತಾನದಲ್ಲಿರುವ ಅಮೆರಿಕ ರಾಯಭಾರಿ ಕಚೇರಿಯನ್ನು ಧ್ವಂಸಗೊಳಿಸಿದ್ದಾರೆ. ಹಿಂಸಾಚಾರದಲ್ಲಿ 10 ಮಂದಿ ಮೃತಪಟ್ಟಿದ್ದು, 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಇರಾನ್ ಮೇಲೆ ಅಮೆರಿಕ ಹಾಗೂ ಇಸ್ರೇಲ್ ಶನಿವಾರ ರಾತ್ರಿ ದೊಡ್ಡ ಮಟ್ಟದಲ್ಲಿ ದಾಳಿ ನಡೆಸಿವೆ. ಇರಾನ್ ಕೂಡ ಪ್ರತಿದಾಳಿ ನಡೆಸಿದ್ದು, ಇದರಿಂದ ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನ ಸ್ಥಿತಿ ಮನೆ ಮಾಡಿದೆ.
ಇರಾನ್ ಪರಮೋಚ್ಚ ನಾಯಕ ಅಯಾತೊಲ್ಲಾ ಅಲಿ ಖಮೇನಿ ಹತ್ಯೆ ಮಾಡಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
‘ಖಮೇನಿ ಎಂಬ ಇತಿಹಾಸದ ಅತ್ಯಂತ ಕ್ರೂರ ವ್ಯಕ್ತಿಗಳಲ್ಲಿ ಒಬ್ಬ ಹತನಾಗಿದ್ದಾನೆ’ ಎಂದು ಟ್ರಂಪ್ ತನ್ನ ಸಾಮಾಜಿಕ ಜಾಲತಾಣ ‘ಟ್ರೂಥ್ ಸೋಶಿಯಲ್’ನಲ್ಲಿ ಬರೆದುಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.