
ಪಿಟಿಐ
ಕರಾಚಿ: ವಾಯವ್ಯ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಎರಡು ಬ್ಯಾಂಕ್ ಮತ್ತು ಪೊಲೀಸ್ ಠಾಣೆಗಳ ಮೇಲೆ ದಾಳಿ ನಡೆಸಿದ್ದ ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆ ನಡೆಸಿರುವ ಭದ್ರತಾ ಪಡೆಗಳು, 12 ಉಗ್ರರನ್ನು ಹತ್ಯೆ ಮಾಡಿವೆ ಎಂದು ಪಾಕಿಸ್ತಾನ ಸೇನೆ ಶನಿವಾರ ತಿಳಿಸಿದೆ.
‘ಖರನ್ ಪಟ್ಟಣದ ಬ್ಯಾಂಕ್‌ಗಳು ಮತ್ತು ಪೊಲೀಸ್ ಠಾಣೆ ಮೇಲೆ ಶುಕ್ರವಾರ 15ರಿಂದ 20 ಉಗ್ರರು ದಾಳಿ ಮಾಡಿ, ಕೆಲ ಸಿಬ್ಬಂದಿಯನ್ನು ಒತ್ತೆಯಾಗಿಸಿಕೊಂಡಿದ್ದರು. ಹಣ ದೋಚಿ, ಪರಾರಿಯಾಗಲು ಯತ್ನಿಸಿದ್ದರು ಎಂದು ಸೇನೆಯ ಸಾರ್ವಜನಿಕ ಸಂಪರ್ಕ ವಿಭಾಗ ಮಾಹಿತಿ ನೀಡಿದೆ.
ಕಾರ್ಯಾಚರಣೆ ನಡೆಸಿ ಸಿಬ್ಬಂದಿಯನ್ನು ರಕ್ಷಿಸಿದ್ದು, ಮೂರು ಪ್ರತ್ಯೇಕ ಗುಂಡಿನ ಚಕಮಕಿಗಳಲ್ಲಿ 12 ಮಂದಿ ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಸೇನೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.