ADVERTISEMENT

ಬ್ಯಾಂಕಾಕ್: ಪ್ರಧಾನಿ ಮೋದಿ– ಬಾಂಗ್ಲಾ ಮಧ್ಯಂತರ ಸರ್ಕಾರದ ಸಲಹೆಗಾರ ಯೂನಸ್ ಭೇಟಿ

ಪಿಟಿಐ
Published 4 ಏಪ್ರಿಲ್ 2025, 7:28 IST
Last Updated 4 ಏಪ್ರಿಲ್ 2025, 7:28 IST
<div class="paragraphs"><p>ಪ್ರಧಾನಿ ಮೋದಿ– ಬಾಂಗ್ಲಾ ಮಧ್ಯಂತರ ಸರ್ಕಾರದ ಸಲಹೆಗಾರ ಯೂನಸ್ ಭೇಟಿ</p></div>

ಪ್ರಧಾನಿ ಮೋದಿ– ಬಾಂಗ್ಲಾ ಮಧ್ಯಂತರ ಸರ್ಕಾರದ ಸಲಹೆಗಾರ ಯೂನಸ್ ಭೇಟಿ

   

– ಪಿಟಿಐ ಚಿತ್ರ

ಬ್ಯಾಂಕಾಕ್: ಪ್ರಧಾನಿ ನರೇಂದ್ರ ಮೋದಿ ಬಾಂಗ್ಲಾದೇಶ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ ಬ್ಯಾಂಕಾಕ್‌ನಲ್ಲಿ ಶುಕ್ರವಾರ ಭೇಟಿಯಾದರು.

ADVERTISEMENT

ಕಳೆದ ವರ್ಷ ಆಗಸ್ಟ್‌ನಲ್ಲಿ ಶೇಖ್ ಹಸೀನಾ ಅವರನ್ನು ಪ್ರಧಾನಿ ಹುದ್ದೆಯಿಂದ ‍ಪದಚ್ಯುತಗೊಳಿಸಿದ ಬಳಿಕ ಭಾರತ ಹಾಗೂ ಬಾಂಗ್ಲಾದೇಶದ ಆಡಳಿತ ಮುಖ್ಯಸ್ಥರ ಮೊದಲ ಭೇಟಿ ಇದಾಗಿದೆ.

ಬಿಮ್‌ಸ್ಟೆಕ್ ಗುಂಪಿನ ನಾಯಕರ ಶೃಂಗಸಭೆಯ ಸಂದರ್ಭದಲ್ಲಿ ಉಭಯ ನಾಯಕರು ಭೇಟಿಯಾದರು.

ವಿದೇಶಾಂಗ ಸಚಿವ ಎಸ್. ಜೈಶಂಕರ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಬಾಲ್ ಕೂಡ ಸಭೆಯಲ್ಲಿ ಹಾಜರಿದ್ದರು.

ಬಿಮ್‌ಸ್ಟೆಕ್ ಗುಂಪಿನ ಮುಂಬರುವ ಶೃಂಗದ ಅಧ್ಯಕ್ಷತೆಯನ್ನು ಬಾಂಗ್ಲಾದೇಶ ವಹಿಸಲಿದೆ.

ಆಗಸ್ಟ್ 2024 ರಲ್ಲಿ ಹಸೀನಾ ಅವರನ್ನು ಪದಚ್ಯುತಗೊಳಿಸಿದ ನಂತರ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರದ ಆಡಳಿತ ಬಾಂಗ್ಲಾದೇಶದಲ್ಲಿದೆ. ಅಲ್ಲಿ ಹಿಂದೂಗಳನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಹಿಂಸಾಚಾರದಿಂದಾಗಿ ಉಭಯ ರಾಷ್ಟ್ರಗಳ ಸಂಬಂಧ ಹಳಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.