
ಪಿಟಿಐ
ಢಾಕಾ: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆದ ದಾಳಿ ಮತ್ತು ಅದರ ಬೆನ್ನಲ್ಲೇ ಭಾರತ–ಬಾಂಗ್ಲಾದೇಶದ ನಡುವೆ ಹದಗೆಟ್ಟಿರುವ ದ್ವಿಪಕ್ಷೀಯ ಸಂಬಂಧದ ಕುರಿತು ಚರ್ಚಿಸಲು, ಭಾರತದಲ್ಲಿನ ಬಾಂಗ್ಲಾದ ರಾಯಭಾರಿ ರಿಯಾಜ್ ಹಮೀದುಲ್ಲಾ ಅವರನ್ನು ಅಲ್ಲಿನ ವಿದೇಶಾಂಗ ಸಚಿವಾಲಯ ತುರ್ತಾಗಿ ಕರೆಯಿಸಿಕೊಂಡಿದೆ. ಸೋಮವಾರ ತಡರಾತ್ರಿ ರಿಯಾಜ್ ಢಾಕಾಕ್ಕೆ ದೌಡಾಯಿಸಿದ್ದಾರೆ.
ಭಾರತ ಮತ್ತು ಬಾಂಗ್ಲಾ ನಡುವಿನ ದ್ವಿಪಕ್ಷೀಯ ಸಹಕಾರವನ್ನು ಉತ್ತಮ ಪಡಿಸುವ ಉದ್ದೇಶದಿಂದ ವಿದೇಶಾಂಗ ಸಚಿವಾಲಯ ರಿಯಾಜ್ ಅವರನ್ನು ತುರ್ತಾಗಿ ಕರೆಯಿಸಿಕೊಂಡಿದೆ ಎಂದು ನಂಬಲರ್ಹ ಮೂಲಗಳನ್ನು ಉಲ್ಲೇಖಿಸಿ ಬಾಂಗ್ಲಾದ ದಿನಪತ್ರಿಕೆ ಪ್ರೊಥಾಮ್ ಅಲೊ ವರದಿ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.